ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

15-18 ವರ್ಷ ವಯಸ್ಸಿನ ಮಕ್ಕಳಿಗೆ ಲಭ್ಯವಿರುವ ಏಕೈಕ ಲಸಿಕೆ ‘ಕೋವ್ಯಾಕ್ಸಿನ್‌’

Last Updated 26 ಡಿಸೆಂಬರ್ 2021, 18:07 IST
ಅಕ್ಷರ ಗಾತ್ರ

ನವದೆಹಲಿ: 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆಭಾರತ್ ಬಯೋಟೆಕ್‌ನ ಕೋವ್ಯಾಕ್ಸಿನ್ ಬಹುಶಃ ಈಗ ಲಭ್ಯವಿರುವ ಏಕೈಕ ಕೋವಿಡ್‌ ಲಸಿಕೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಇನ್ನು,ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಅವರು ಈ ಹಿಂದೆ ಪಡೆದ ಲಸಿಕೆಯನ್ನೇ 3ನೇ ಡೋಸ್‌ ಆಗಿ ನೀಡಲಾಗುವುದು ಎಂದು ಮೂಲಗಳು ಹೇಳಿವೆ.

15 ರಿಂದ 18 ವರ್ಷ ವಯೋಮಾನದ ಮಕ್ಕಳಿಗೆ ಜನವರಿ 3ರಿಂದ ಹಾಗೂ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಜನವರಿ 10 ರಿಂದ ‘ಮುನ್ನೆಚ್ಚರಿಕೆ ಡೋಸ್‌’ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ರಾತ್ರಿ ಘೋಷಣೆ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT