ಖಾಸಗೀಕರಣ ಪ್ರಕ್ರಿಯೆಗೆ ಆದ್ಯತೆ ನೀಡಲು ಒತ್ತಾಯ

ನವದೆಹಲಿ: ಸರ್ಕಾರಿ ಸ್ವಾಮ್ಯದ ಉದ್ಯಮಗಳನ್ನು ಖಾಸಗೀಕರಣಗೊಳಿಸಬೇಕು ಮತ್ತು ಮೂಲಸೌಕರ್ಯ ಹೂಡಿಕೆಯನ್ನು ಹೆಚ್ಚಿಸಬೇಕು ಎಂದು ಹಿರಿಯ ಆರ್ಥಿಕ ತಜ್ಞರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಒತ್ತಾಯಿಸಿದ್ದಾರೆ.
ಶುಕ್ರವಾರ ಪ್ರಧಾನಿ ಜತೆ ನಡೆದ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದ ತಜ್ಞರು, ಹೂಡಿಕೆದಾರರ ವಿಶ್ವಾಸವನ್ನು ಗಳಿಸುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.
ಸರ್ಕಾರಿ ಉದ್ಯಮಗಳ ಖಾಸಗೀಕರಣಕ್ಕೆ ಪ್ರತ್ಯೇಕ ಸಚಿವಾಲಯವನ್ನು ಸ್ಥಾಪಿಸಬೇಕು ಎಂದು ತಜ್ಞರು ಸಭೆಯಲ್ಲಿ ಹೇಳಿದ್ದಾರೆ.
ಬಜೆಟ್‌ಗೆ ಮುನ್ನ ನಡೆದ ಈ ಸಭೆಯಲ್ಲಿ ಅರವಿಂದ ಪಣಗರಿಯಾ, ಕೆ.ವಿ ಕಾಮತ್, ರಾಕೇಶ್ ಮೋಹನ್, ಶಂಕರ್ ಆಚಾರ್ಯ, ಶೇಖರ್ ಶಾ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.