ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುರುಗ್ರಾಮದ ರಸ್ತೆಯಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ವಿದೇಶಿ ವ್ಯಕ್ತಿ ಬಂಧನ

Last Updated 16 ಮಾರ್ಚ್ 2023, 2:58 IST
ಅಕ್ಷರ ಗಾತ್ರ

ಗುರುಗ್ರಾಮ: ರಸ್ತೆಯಲ್ಲಿ ಬೆತ್ತಲೆಯಾಗಿ ತಿರುಗಾಡುತ್ತಿದ್ದ ವಿದೇಶಿ ವ್ಯಕ್ತಿಯನ್ನು ಗುರುಗ್ರಾಮ ಪೊಲೀಸರು ಬುಧವಾರ ಬಂಧಿಸಿದ್ದಾರೆ.

ಬಂಧಿತನನ್ನು ನೈಜಿರಿಯಾ ಮೂಲದ ವ್ಯಕ್ತಿ ಎಂದು ಗುರುತಿಸಲಾಗಿದ್ದು, ಆತನನ್ನು ಮಾನಸಿಕ ತಪಾಸಣೆಗಾಗಿ ಗುರುಗಾಗ್ರಾಮದ ಸೆಕ್ಟರ್ 10ರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬುಧವಾರ ಸಂಜೆ 6 ‌ಗಂಟೆ ಸುಮಾರು ಈ ವ್ಯಕ್ತಿ ಸಂಪೂರ್ಣ ಬೆತ್ತಲೆಯಾಗಿ ಗುರುಗ್ರಾಮದ ತುಲಿಪ್ ಚೌಕ್‌ ಬಳಿ ತಿರುಗಾಡುತ್ತಿದ್ದ. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾಗ ಆತ ಹತ್ತಿರದ ಹಳ್ಳಿಯೊಂದಕ್ಕೆ ಓಡಿಹೋಗಿ ಮರದ ಬಳಿ ಅವಿತುಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಒಂದು ವೇಳೆ, ಆತನ ಮಾನಸಿಕ ಸ್ಥಿತಿ ಸರಿಯಾಗಿದ್ದರೇ ಆತನ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT