ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯ ಚಂದಗಾಮ್ನಲ್ಲಿ ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಜೈಶೆ-ಮೊಹಮ್ಮದ್(ಜೆಇಎಂ) ಸಂಘಟನೆಯ ಮೂವರು ಉಗ್ರರು ಹತರಾಗಿದ್ದಾರೆ.

'ಹತ್ಯೆಯಾದ ಉಗ್ರರಲ್ಲಿ ಒಬ್ಬ ಪಾಕಿಸ್ತಾನದವನಾಗಿದ್ದು, ಮತ್ತಿಬ್ಬರು ಸ್ಥಳೀಯರು.ಈ ಮೂವರು ಜೆಇಎಂ ಉಗ್ರ ಸಂಘಟನೆಗೆ ಸೇರಿದವರಾಗಿದ್ದಾರೆ. ಜೆಇಎಂ ಉಗ್ರರ ಹತ್ಯೆಯು ಭದ್ರತಾ ಪಡೆಗಳಿಗೆ ಸಿಕ್ಕ ದೊಡ್ಡ ಯಶಸ್ಸು' ಎಂದು ಕಾಶ್ಮೀರ ವಲಯ ಐಜಿಪಿ ವಿಜಯಕುಮಾರ್ ತಿಳಿಸಿದರು.

'ಎನ್ ಕೌಂಟರ್ ನಡೆದ ಸ್ಥಳದಲ್ಲಿ 2ಎಂ-4 ಕಾರ್ಬೈನ್ ಹಾಗೂ ಎಕೆ ಮಾದರಿಯ ಒಂದು ರೈಫಲ್ ಸೇರಿದಂತೆ ಇತರೆ ಮದ್ದುಗುಂಡುಗಳು ದೊರೆತಿವೆ' ಎಂದು ಅವರು ಮಾಹಿತಿ ನೀಡಿದರು.

ಉಗ್ರರು ಅಡಗಿರುವ ಖಚಿತ ಮಾಹಿತಿ ಮೇರೆಗೆ ಸ್ಥಳೀಯ ಪೊಲೀಸ್, ಸೇನೆ ಹಾಗೂ ಸಿಆರ್ ಪಿಎಫ್ ಜಂಟಿ ಶೋಧ ಕಾರ್ಯಾಚರಣೆ ನಡೆಸಿದ್ದವು. ಈ ವೇಳೆ ಅಡಗಿದ್ದ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡಿನ ದಾಳಿ ನಡೆಸಿದರು. ಭದ್ರತಾ ಪಡೆಗಳ ಪ್ರತಿದಾಳಿಗೆ ಮೂವರು ಉಗ್ರರು ಹತರಾದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.