ದೆಹಲಿ ಪಾಲಿಕೆ ಚುನಾವಣೆ: ಎಎಪಿ ಮಾಜಿ ಶಾಸಕ ಸುರೇಂದ್ರ ಸಿಂಗ್ ಬಿಜೆಪಿಗೆ ಸೇರ್ಪಡೆ

ನವದೆಹಲಿ: ದೆಹಲಿಯ ಆಮ್ ಆದ್ಮಿ ಪಕ್ಷದ (ಎಎಪಿ) ಮಾಜಿ ಶಾಸಕ ಸುರೇಂದರ್ ಸಿಂಗ್ ಅವರು ಮಂಗಳವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
2020ರ ದೆಹಲಿ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಪಕ್ಷದಿಂದ ಟಿಕೆಟ್ ದೊರೆತಿರಲಿಲ್ಲ. ಇದರಿಂದ ಬೇಸತ್ತಿದ್ದ ಅವರು ಎಎಪಿಗೆ ರಾಜೀನಾಮೆ ಸಲ್ಲಿಸಿದ್ದರು.
ಇದೀಗ ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸುರೇಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆಯಾಗಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.
ದೆಹಲಿ ಮಹಾನಗರ ಪಾಲಿಕೆಯ 250 ವಾರ್ಡ್‌ಗಳಿಗೆ ಡಿಸೆಂಬರ್ 4ರಂದು ಚುನಾವಣೆ ನಡೆಯಲಿದ್ದು, ಡಿ.7ರಂದು ಮತ ಎಣಿಕೆ ನಡೆಯಲಿದೆ.
Former AAP MLA Commando Surender Singh joins Bharatiya Janata Party in Delhi pic.twitter.com/zLrU0FTXrk
— ANI (@ANI) November 29, 2022
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.