ಶುಕ್ರವಾರ, ಆಗಸ್ಟ್ 12, 2022
24 °C

ಮಲೇಷ್ಯಾ ಮಹಿಳೆ ಮೇಲೆ ಅತ್ಯಾಚಾರ: ತಮಿಳುನಾಡು ಮಾಜಿ ಸಚಿವ ಬೆಂಗಳೂರಲ್ಲಿ ಸೆರೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಲೇಷ್ಯಾದ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವಸಗಿ, ಗರ್ಭಪಾತಕ್ಕೆ ಮಾಡಿಸಿದ ಮತ್ತು ಬೆದರಿಕೆಯೊಡ್ಡಿದ ಆರೋಪದ ಮೇಲೆ ತಮಿಳುನಾಡಿನ ಮಾಜಿ ಸಚಿವ, ಎಐಎಡಿಎಂಕೆ ಮುಖಂಡ ಎಂ.ಮಣಿಕಂಠನ್ ಅವರನ್ನು ಚೆನ್ನೈ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.

ಪ್ರಕರಣದಲ್ಲಿ ಮಣಿಕಂಠನ್‌ ಅವರಿಗೆ ಮದ್ರಾಸ್ ಹೈಕೋರ್ಟ್ ನಿರೀಕ್ಷಣಾ ಜಾಮೀನು ನಿರಾಕರಿಸಿತ್ತು. ಅಂದಿನಿಂದಲೂ ಮಣಿಕಂಠನ್‌ ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್‌ಐ ಭಾನುವಾರ ವರದಿ ಮಾಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು