ಹೈದರಾಬಾದ್: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಅವರು ಕಾಂಗ್ರೆಸ್‌ಗೆ ಭಾನುವಾರ ರಾಜೀನಾಮೆ ನೀಡಿದ್ದಾರೆ.
ಕಿರಣ್ ಕುಮಾರ್ ರೆಡ್ಡಿ ಅವರು ಅವಿಭಜಿತ ಆಂಧ್ರಪ್ರದೇಶದ ಕೊನೆಯ ಸಿಎಂ ಕೂಡ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಕಿರಣ್ ಕುಮಾರ್ ರೆಡ್ಡಿ, ‘ದಯವಿಟ್ಟು ಈ ಪತ್ರವನ್ನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಪ್ರಾಥಮಿಕ ಸದಸ್ಯತ್ವಕ್ಕೆ ನನ್ನ ರಾಜೀನಾಮೆ ಎಂದು ಪರಿಗಣಿಸಿ" ಎಂದು ಒಂದು ಸಾಲಿನಲ್ಲಿ ತಿಳಿಸಿದ್ದಾರೆ.
ಆಂಧ್ರಪ್ರದೇಶದ ವಿಭಜನೆಯನ್ನು ವಿರೋಧಿಸಿದ್ದ ಕಿರಣ್ ಕುಮಾರ್ 2014ರಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ, ಕಾಂಗ್ರೆಸ್‌ನಿಂದಲೂ ಹೊರನಡೆದಿದ್ದರು. ಕಾಂಗ್ರೆಸ್ ತೊರೆದ ಬಳಿಕ, 'ಕಿರಣ್ ಜೈ ಸಮೈಕ್ಯಾ ಆಂಧ್ರ' ಪಕ್ಷವನ್ನು ಕಟ್ಟಿದ್ದರು. 2014ರ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಈ ಪಕ್ಷ ಸ್ಥಾನಗಳನ್ನು ಗೆಲ್ಲುವಲ್ಲಿ ವಿಫಲವಾಗಿತ್ತು.
ನಂತರ 2018ರಲ್ಲಿ ಅವರು ಮತ್ತೆ ಕಾಂಗ್ರೆಸ್ ಸೇರಿದ್ದರು. ಆದರೆ ಈಗ ಕಾಂಗ್ರೆಸ್‌ನಿಂದ ಮತ್ತೆ ಹೊರಬಂದಿರುವ ಅವರ ರಾಜಕೀಯ ನಡೆ ಕುತೂಹಲ ಮೂಡಿಸಿದೆ.
ಇವುಗಳನ್ನೂ ಓದಿ
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.