ಗುರುವಾರ , ಮೇ 13, 2021
16 °C

ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ

ನವದೆಹಲಿ: ಸಿಬಿಐನ ಮಾಜಿ ನಿರ್ದೇಶಕ ರಂಜಿತ್‌ ಸಿನ್ಹಾ(68) ಶುಕ್ರವಾರ ಬೆಳಿಗ್ಗೆ ದೆಹಲಿಯಲ್ಲಿ ನಿಧನರಾದರು.

1974ನೇ ಬ್ಯಾಚ್‌ ಬಿಹಾರ ಕೇಡರ್‌ನ ಐಪಿಎಸ್‌ ಅಧಿಕಾರಿ (ನಿವೃತ್ತ) ಸಿನ್ಹಾ ಹಲವು ಪ್ರಮುಖ ಸ್ಥಾನಗಳ ಜವಾಬ್ದಾರಿ ನಿರ್ವಹಿಸಿದ್ದಾರೆ. ಭಾರತ-ಟಿಬೆಟ್ ಗಡಿ ಭದ್ರತಾ ಪಡೆಯ ಮಹಾನಿರ್ದೇಶಕರಾಗಿಯೂ ಕಾರ್ಯನಿರ್ವಹಿಸಿದ್ದರು. ಶುಕ್ರವಾರ ಬೆಳಿಗ್ಗೆ 4:30ಕ್ಕೆ ಸಿನ್ಹಾ ನಿಧನರಾದರು.

ಕೋವಿಡ್‌–19 ಸಂಬಂಧಿಸಿದ ಕಾರಣಗಳಿಂದಾಗಿ ಸಾವು ಸಂಭವಿಸಿರಬಹುದೆಂದು ವರದಿಯಾಗಿದೆ. ಅವರಿಗೆ ಕೊರೊನಾ ವೈರಸ್‌ ಸೋಂಕು ತಗುಲಿರುವುದು ಗುರುವಾರ ರಾತ್ರಿ ದೃಢಪಟ್ಟಿತ್ತು.

2012ರಲ್ಲಿ ಸಿಬಿಐ ನಿರ್ದೇಶಕರಾಗಿ ನೇಮಕವಾಗುವುದಕ್ಕೂ ಮುನ್ನ ರೈಲ್ವೆ ರಕ್ಷಣಾ ಪಡೆಯ (ಆರ್‌ಪಿಎಫ್‌) ಮುಖ್ಯಸ್ಥರಾಗಿ, ಸಿಬಿಐನ ಪಾಟ್ನಾ ಮತ್ತು ದೆಹಲಿಯಲ್ಲಿ ಹಲವು ಸ್ಥಾನಗಳಲ್ಲಿ ಕಾರ್ಯನಿರ್ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು