ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಜಿ ಸಿಜೆಐ ಶರದ್‌ ಬೊಬಡೆ ಅವರಿಗೆ ಮಾತೃ ವಿಯೋಗ

Last Updated 28 ಸೆಪ್ಟೆಂಬರ್ 2021, 6:55 IST
ಅಕ್ಷರ ಗಾತ್ರ

ನಾಗಪುರ: ಸುಪ್ರೀಂ ಕೋರ್ಟ್‌ನ ನಿವೃತ್ತ ಮುಖ್ಯ ನ್ಯಾಯಮೂರ್ತಿ(ಸಿಜೆಐ) ಶರದ್ ಬೊಬಡೆ ಅವರ ತಾಯಿ ಮುಕ್ತಾ ಬೊಬಡೆ (96) ಅವರು ವಯೋಸಹಜ ಕಾರಣದಿಂದ ಮಂಗಳವಾರ ಮುಂಜಾನೆ 3.30ಕ್ಕೆ ಇಲ್ಲಿನ ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ ಎಂದು ಬೊಬಡೆ ಅವರ ಸಹಾಯಕರು ತಿಳಿಸಿದ್ದಾರೆ.

ಮಂಗಳವಾರ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಸಹಾಯಕರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ನಾಗಪುರ ಮೂಲದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಶರದ್ ಬೋಬಡೆ ಅವರು, ನವೆಂಬರ್ 2019 ರಲ್ಲಿ ಸುಪ್ರೀಂ ಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ಸ್ವೀಕರಿಸಿದರು. ಏಪ್ರಿಲ್ 2021 ರಲ್ಲಿ ನಿವೃತ್ತರಾದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT