ರಂಜನ್ ಗೊಗೊಯಿಗೆ ‘ಝಡ್ ಪ್ಲಸ್’ ಶ್ರೇಣಿಯ ಭದ್ರತೆ

ನವದೆಹಲಿ: ಸುಪ್ರೀಂ ಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೊಯಿ ಅವರಿಗೆ ‘ಝಡ್ ಪ್ಲಸ್’ ವಿಐಪಿ ಶ್ರೇಣಿಯ ಭದ್ರತೆ ಒದಗಿಸಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ ಎಂದು ಅಧಿಕೃತ ಮೂಲಗಳು ಶುಕ್ರವಾರ ತಿಳಿಸಿವೆ.
ಗೊಗೊಯಿ ಅವರು ಪ್ರಯಾಣಿಸುವ ವೇಳೆಗೆ ಅವರಿಗೆ ಶಸ್ತ್ರ ಸಜ್ಜಿತ ಕಮಾಂಡೊಗಳು ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಸಿಬ್ಬಂದಿ ಭದ್ರತೆ ಒದಗಿಸಲಿದ್ದಾರೆ. ಪ್ರಸ್ತುತ ರಾಜ್ಯಸಭೆ ಸದಸ್ಯರಾಗಿರುವ ಗೊಗೊಯಿ ಅವರಿಗೆ ಈ ಹಿಂದೆ ದೆಹಲಿ ಪೊಲೀಸರು ಭದ್ರತೆ ಒದಗಿಸುತ್ತಿದ್ದರು.
2019 ನವೆಂಬರ್ನಲ್ಲಿ ಮುಖ್ಯ ನ್ಯಾಯಮೂರ್ತಿ ಹುದ್ದೆಯಿಂದ ನಿವೃತ್ತರಾಗಿದ್ದ ಗೊಗೊಯಿ ಅವರನ್ನು ಸರ್ಕಾರವು ರಾಜ್ಯಸಭೆಗೆ ನಾಮನಿರ್ದೇಶನ ಮಾಡಿತ್ತು. ಇಲ್ಲಿಯವರೆಗೂ 63 ಗಣ್ಯ ವ್ಯಕ್ತಿಗಳಿಗೆ ಸಿಆರ್ಪಿಎಫ್ ಭದ್ರತೆ ಒದಗಿಸುತ್ತಿದೆ.
8–12 ಸಿಬ್ಬಂದಿಯಿರುವ ಸಿಆರ್ಪಿಎಫ್ ಸಿಬ್ಬಂದಿ ಗೊಗೊಯಿ ಪ್ರಯಾಣದ ವೇಳೆ ಭದ್ರತೆಯನ್ನು ಒದಗಿಸಲಿದ್ದು, ಇದೇ ರೀತಿಯ ಮತ್ತೊಂದು ತಂಡವು ಅವರ ನಿವಾಸಕ್ಕೆ ಭದ್ರತೆ ಒದಗಿಸಲಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.