ಪಣಜಿ: ಗೋವಾದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕ ಲುಯಿಜಿನೊ ಫೆಲೆರೊ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸೇರ್ಪಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಂದಿನ ವರ್ಷ ಗೋವಾ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಟಿಎಂಸಿ ಈಗಾಗಲೇ ಘೋಷಿಸಿದೆ.

ಓದಿ:ಹಿಂಸೆ ತಡೆಯದ ಮಮತಾಗೆ ವಿಶ್ವ ಶಾಂತಿ ಸಭೆಯಲ್ಲಿ ಭಾಗವಹಿಸಲು ಹಕ್ಕಿಲ್ಲ: ಅಧಿಕಾರಿ

ಫೆಲೆರೊ ಅವರು ಸೋಮವಾರ ಪತ್ರಿಕಾಗೋಷ್ಠಿ ಕರೆದಿದ್ದು, ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸೇರುವ ಬಗ್ಗೆ ಅಧಿಕೃತವಾಗಿ ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.

ಟಿಎಂಸಿ ಸೇರುವ ಸಾಧ್ಯತೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಲು ಅವರು ನಿರಾಕರಿಸಿದ್ದಾರೆ. ಸದ್ಯ ನಾನು ಧ್ಯಾನಸ್ಥ ಸ್ಥಿತಿಯಲ್ಲಿದ್ದೇನೆ. ಎಲ್ಲವನ್ನೂ ಗಮನಿಸುತ್ತಿದ್ದೇನೆ. ಗೋವಾದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಯಾರಾದರೂ ಜನರ ಪರ ನಿಲ್ಲಬೇಕಿದೆ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಸೂಕ್ತ ಸಮಯ ಬಂದಾಗ ಎಲ್ಲವನ್ನೂ ಬಹಿರಂಗಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ.

ಓದಿ:ಹೊಸ ಸಂಸತ್ ಕಟ್ಟಡ ಕಾಮಗಾರಿ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ, ಪರಿಶೀಲನೆ

ಟಿಎಂಸಿಯು ಗೋವಾ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದೂ ಶೀಘ್ರದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಬಹಿರಂಗಪಡಿಸಲಿದೆ ಎಂದೂ ಪಕ್ಷದ ನಾಯಕ ಡೆರೆಕ್ ಒಬ್ರಿಯಾನ್ ಶನಿವಾರ ಹೇಳಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.