ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ನಿಧನ

Last Updated 29 ಅಕ್ಟೋಬರ್ 2020, 7:52 IST
ಅಕ್ಷರ ಗಾತ್ರ

ಅಹಮದಾಬಾದ್‌: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ಅವರು ಗುರುವಾರ ನಿಧನರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕೇಶುಭಾಯ್ ಪಟೇಲ್ 1995ರಲ್ಲಿ ಮೊದಲ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ನಂತರ 1998 –2001ರ ಅವಧಿಯಲ್ಲಿ ಎರಡನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದರು.

ಪಟೇಲ್ಅವರು ಆರು ಬಾರಿ ಗುಜರಾತ್ ವಿಧಾನಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರು. 2012ರ ವಿಧಾನಸಭಾ ಚುನಾವಣೆಯಲ್ಲಿ ಕಳಪೆ ಪ್ರದರ್ಶನ ತೋರಿದ ಕಾರಣ ಪಟೇಲ್ ಅವರು ಆ ವರ್ಷ ಬಿಜೆಪಿಯನ್ನು ತೊರೆದು, ಗುಜರಾತ್ ಪರಿವರ್ತನ ಪಕ್ಷವನ್ನು ಸ್ಥಾಪಿಸಿದರು. ನಂತರ 2014ರಲ್ಲಿ ಆ ಪಕ್ಷವನ್ನು ಬಿಜೆಪಿಯಲ್ಲಿ ವಿಲೀನಗೊಳಿಸಿದರು.

1928 ರಲ್ಲಿ ಜುನಾಗಢ ಜಿಲ್ಲೆಯ ವಿಶಾವದಾರ್ ಪಟ್ಟಣದಲ್ಲಿ ಜನಿಸಿದ ಕೇಶುಭಾಯ್‌ ಪಟೇಲ್ ಅವರು, 1945 ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (ಆರ್‌ಎಸ್‌ಎಸ್) ಪ್ರಚಾರಕರಾಗಿ ಸೇರಿದರು. ಅವರು ಜನ ಸಂಘದ ಕಾರ್ಯಕರ್ತರಾಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT