ಗುರುವಾರ , ನವೆಂಬರ್ 26, 2020
20 °C

ಗುಜರಾತ್‌ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ಗುಜರಾತ್‌ ಮಾಜಿ ಮುಖ್ಯಮಂತ್ರಿ ಕೇಶುಭಾಯ್‌ ಪಟೇಲ್‌ ನಿಧನಕ್ಕೆ ಪ್ರಧಾನಿ ಮೋದಿ ಕಂಬನಿ ಮಿಡಿದಿದ್ದಾರೆ.

ಈ ಬಗ್ಗೆ ಗುರುವಾರ ಸಂತಾಪ ಸೂಚಿಸಿರುವ ಅವರು, 'ಕೇಶುಭಾಯ್ ನಿಧನದ ಸುದ್ದಿ ಕೇಳಿ ನನಗೆ ತುಂಬಾ ನೋವಾಗಿದೆ. ಅವರು ನನಗೆ ತಂದೆಯ ಸಮಾನರಾಗಿದ್ದರು. ಅವರ ಅನುಪಸ್ಥಿತಿಯನ್ನು ಭರಿಸಲಾಗದು' ಎಂದು ತಿಳಿಸಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಗುಜರಾತ್‌ನ ಮಾಜಿ ಮುಖ್ಯಮಂತ್ರಿ ಕೇಶುಭಾಯ್ ಪಟೇಲ್(92) ಅವರು ಗುರುವಾರ ನಿಧನರಾಗಿದ್ದಾರೆ.

ಕೇಶುಭಾಯ್ ಪಟೇಲ್ 1995ರಲ್ಲಿ ಮೊದಲ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ನಂತರ 1998 –2001ರ ಅವಧಿಯಲ್ಲಿ ಎರಡನೇ ಬಾರಿಗೆ ಗುಜರಾತ್‌ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು