ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹರಿಯಾಣ ಕಾಂಗ್ರೆಸ್‌ನ ಮಾಜಿ ನಾಯಕ ಕುಲದೀಪ್‌ ಬಿಷ್ಣೋಯಿ ಬಿಜೆಪಿಗೆ ಸೇರ್ಪಡೆ

Last Updated 4 ಆಗಸ್ಟ್ 2022, 9:29 IST
ಅಕ್ಷರ ಗಾತ್ರ

ನವದೆಹಲಿ:ಹರಿಯಾಣ ಕಾಂಗ್ರೆಸ್‌ನ ಮಾಜಿ ನಾಯಕ ಕುಲದೀಪ್‌ ಬಿಷ್ಣೋಯಿ ಅವರು ತಮ್ಮ ಪತ್ನಿ ರೇಣುಕಾ ಬಿಷ್ಣೋಯಿ ಅವರೊಂದಿಗೆ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರ ಸಮ್ಮುಖದಲ್ಲಿಗುರುವಾರ ಬಿಜೆಪಿಗೆ ಸೇರ್ಪಡೆಯಾದರು.

ಮಾಜಿ ಮುಖ್ಯಮಂತ್ರಿ ಭಜನ್‌ ಲಾಲ್‌ ಅವರ ಮಗನಾಗಿರುವ ಕುಲದೀಪ್‌ಬಿಷ್ಣೋಯಿ, ನಾಲ್ಕು ಬಾರಿ ಶಾಸಕರಾಗಿ ಮತ್ತು ಎರಡು ಸಲ ಸಂಸದರಾಗಿ ಆಯ್ಕೆಯಾಗಿದ್ದಾರೆ. ಅವರ ಪತ್ನಿರೇಣುಕಾ ಕೂಡ ಮಾಜಿ ಶಾಸಕಿ.

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿಬಿಷ್ಣೋಯಿ ಅವರನ್ನು ಬಿಜೆಪಿಗೆ ಸ್ವಾಗತಿಸಿದ ಮುಖ್ಯಮಂತ್ರಿ ಖಟ್ಟರ್‌, ಬಿಷ್ಣೋಯಿ ಸೇರ್ಪಡೆಯು ಸಂಘಟನೆಗೆ ಬಲ ತುಂಬಲಿದೆ ಎಂದು ಹೇಳಿದ್ದಾರೆ.

ಬಿಷ್ಣೋಯಿ ಅವರು ಕಾಂಗ್ರೆಸ್‌ ಶಾಸಕರಾಗಿದ್ದರೂ, ಇತ್ತೀಚೆಗೆ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ನಾಯಕತ್ವವನ್ನು ಬೆಂಬಲಿಸುತ್ತಿದ್ದಾರೆ ಎಂದೂ ಖಟ್ಟರ್ ಉಲ್ಲೇಖಿಸಿದ್ದಾರೆ.

ಇದೇ ವೇಳೆ,ಮೋದಿ 'ಶ್ರೇಷ್ಠ ಪ್ರಧಾನಿ' ಎಂದು ಶ್ಲಾಘಿಸಿದ ಬಿಷ್ಣೋಯಿ, ಸದಾ ದೇಶ ಮತ್ತು ಬಡವರ ಕಲ್ಯಾಣದ ಬಗ್ಗೆ ಚಿಂತಿಸುವ ಅವರನ್ನು (ಮೋದಿಯವರನ್ನು) 'ಭಾರತದ ಅತ್ಯುತ್ತಮ ಪ್ರಧಾನಿ' ಎಂದು ವರ್ಣಿಸಿದರೆ ತಪ್ಪಾಗುವುದಿಲ್ಲ ಎಂದು ಹೊಗಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT