ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ವೀರಭದ್ರ ಸಿಂಗ್ ನಿಧನ

Last Updated 8 ಜುಲೈ 2021, 7:46 IST
ಅಕ್ಷರ ಗಾತ್ರ

ಶಿಮ್ಲಾ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಹಿಮಾಚಲ ಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಹಿರಿಯ ಮುಖಂಡ ವೀರಭದ್ರ ಸಿಂಗ್ ಗುರುವಾರ ಮುಂಜಾನೆ ನಿಧನರಾದರು.

ವೀರಭದ್ರ ಸಿಂಗ್ ಅವರು ಇಂದಿರಾ ಗಾಂಧಿ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾದರು ಎಂದು ಐಜಿಎಂಸಿ ಹಿರಿಯ ವೈದ್ಯಕೀಯ ಅಧೀಕ್ಷಕ ಡಾ. ಜನಕ್ ರಾಜ್ ಖಚಿತಪಡಿಸಿದ್ದಾರೆ.

87ವರ್ಷದ ಸಿಂಗ್ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಏಪ್ರಿಲ್ 13ರಂದು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಒದಗಿಸಲಾಗಿತ್ತು.

ಬಳಿಕ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಮರಳಿದ್ದರು. ಈ ನಡುವೆ ಕೆಲವು ದಿನಗಳ ಹಿಂದೆ ಆರೋಗ್ಯ ಹದಗೆಟ್ಟು ಐಜಿಎಂಸಿಗೆ ದಾಖಲಾಗಿದ್ದರು.

ಅವರು ಆರು ಬಾರಿ ಹಿಮಾಚಲ ಪ್ರದೇಶದ ಮುಖ್ಯಮಂತ್ರಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT