ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಿಮಾಚಲ ಪ್ರದೇಶ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಜೈ ರಾಮ್‌ ಠಾಕೂರ್‌ ಆಯ್ಕೆ

Last Updated 25 ಡಿಸೆಂಬರ್ 2022, 10:48 IST
ಅಕ್ಷರ ಗಾತ್ರ

ಶಿಮ್ಲಾ, ಹಿಮಾಚಲ ಪ್ರದೇಶ: ಇಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಆರನೇ ಬಾರಿ ಶಾಸಕರಾಗಿರುವ ಜೈ ರಾಮ್‌ ಠಾಕೂರ್‌ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಾನುವಾರ ಘೋಷಣೆ ಮಾಡಲಾಗಿದೆ ಎಂದು ವಿರೋಧ ಪಕ್ಷದ ಹಿರಿಯ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

ಠಾಕೂರ್‌ ಅವರನ್ನು 24 ಮಂದಿ ಶಾಸಕರ ಒಪ್ಪಿಗೆಯ ಮೇರೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಹಿರಿಯ ನಾಯಕ ಮತ್ತು ಚುನಾವಣಾ ನಿರ್ವಹಣಾ ಸಮಿತಿಯ ಮುಖ್ಯಸ್ಥ ಮಂಗಲ್‌ ಪಾಂಡೆ ತಿಳಿಸಿದ್ದಾರೆ.

ಬಿಜೆಪಿ ಶಾಸಕರ ಸಭೆಯಲ್ಲಿ ಜೈ ರಾಮ್‌ ಠಾಕೂರ್‌, ರಾಜ್ಯ ಬಿಜೆಪಿ ನಾಯಕ ಸುರೇಶ್‌ ಕಶ್ಯಪ್‌, ರಾಜ್ಯ ಬಿಜೆಪಿ ಉಸ್ತುವಾರಿ ಮತ್ತು ಸಹ ಉಸ್ತುವಾರಿ ಶಾಸಕ ಅವಿನಾಶ್‌ ರಾಜ್‌ ಖನ್ನಾ, ಸಂಜಯ್‌ ಟಂಡನ್‌ ಹಾಗೂ ಕೇಂದ್ರ ವೀಕ್ಷಕ ವಿನೋದ್‌ ತಾವ್ಡಾ ಉಪಸ್ಥಿತರಿದ್ದರು.

ನವೆಂಬರ್‌ನಲ್ಲಿ ನಡೆದ 68 ಸದಸ್ಯರಿದ್ದ ವಿಧಾನಸಭಾ ಚುನಾವಣೆಯಲ್ಲಿ 40 ಸೀಟುಗಳನ್ನು ಗೆಲ್ಲುವ ಮೂಲಕ ಬಿಜೆಪಿಯ ವಿರುದ್ಧ ಕಾಂಗ್ರೆಸ್‌ ಜಯ ಸಾಧಿಸಿತ್ತು. ಬಿಜೆಪಿ ಪಕ್ಷ 25 ಸ್ಥಾನಗಳನ್ನು ಗೆದ್ದಿತ್ತು.

ಇತ್ತೀಚೆಗೆ ಮುಕ್ತಾಯಗೊಂಡ ಚುನಾವಣೆಯಲ್ಲಿ ಸೆರಜ್‌ ಪ್ರದೇಶದಿಂದ ಠಾಕೂರ್‌ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT