ಶ್ರೀನಗರ: ಇತ್ತೀಚೆಗೆ ಕೊರೊನಾ ಸೋಂಕು ದೃಢಪಟ್ಟಿದ್ದ ನ್ಯಾಷನಲ್ ಕಾನ್ಫರೆನ್ಸ್ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ವೈದ್ಯರ ಸಲಹೆ ಮೇರೆಗೆ ಶನಿವಾರ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಟ್ವೀಟರ್‌ನಲ್ಲಿ ಮಾಹಿತಿ ನೀಡಿರುವ ಫಾರೂಕ್ ಅವರ ಪುತ್ರ ಒಮರ್ ಅಬ್ದುಲ್ಲಾ ‘ಸೂಕ್ತ ಚಿಕಿತ್ಸೆ ಹಾಗೂ ವೈದ್ಯಕೀಯ ಆರೈಕೆಯ ಹಿನ್ನೆಲೆಯಲ್ಲಿ ವೈದ್ಯರ ಸಲಹೆ ಮೇರೆಗೆ ಫಾರೂಕ್ ಅಬ್ದುಲ್ಲಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ‘ ಎಂದು ಹೇಳಿದ್ದಾರೆ.

‘ನಮ್ಮ ತಂದೆಯ ಆರೋಗ್ಯ ಸುಧಾರಣೆಗಾಗಿ ಹಾರೈಸಿದ ಪ್ರತಿಯೊಬ್ಬರಿಗೂ ನಮ್ಮ ಕುಟುಂಬ ಕೃತಜ್ಞತೆ ಸಲ್ಲಿಸುತ್ತಿದೆ‘ ಎಂದು ಒಮರ್ ಟ್ವೀಟ್ ಮಾಡಿದ್ದಾರೆ.

85 ವರ್ಷದ ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಕೋವಿಡ್ 19 ದೃಢಪಟ್ಟಿತ್ತು. ಆರಂಭದಲ್ಲಿ ಅವರನ್ನು ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿತ್ತು. ಆದರೆ ಉತ್ತಮ ವೈದ್ಯಕೀಯ ಆರೈಕೆಗಾಗಿ ವೈದ್ಯರು ಶನಿವಾರ ಅವರನ್ನು ಆಸ್ಪತ್ರೆಗೆ ದಾಖಲಿಸುವಂತೆ ಸಲಹೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.