ಮಂಗಳವಾರ, ಮೇ 18, 2021
30 °C

ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಜಗಮೋಹನ್‌ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಜಗಮೋಹನ್‌ ಮಲ್ಹೋತ್ರಾ ಅವರು ಅನಾರೋಗ್ಯದ ಕಾರಣದಿಂದ ಇಂದು ದೆಹಲಿಯಲ್ಲಿ ನಿಧನರಾಗಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಜಗಮೋಹನ್‌ ಅವರ ನಿಧನದಿಂದ ದೇಶಕ್ಕೆ ತುಂಬಲಾರದ ನಷ್ಟ ಉಂಟಾಗಿದೆ ಎಂದಿದ್ದಾರೆ.

ʼಜಗಮೋಹನ್‌ ಅವರ ನಿಧನವು ದೇಶಕ್ಕೆ ದೊಡ್ಡ ನಷ್ಟವಾಗಿದೆ. ಅವರು ಮಾದರಿ ಆಡಳಿತಗಾರ ಮತ್ತು ಮೇಧಾವಿಯಾಗಿದ್ದರು. ದೇಶವನ್ನು ಪ್ರಗತಿಯತ್ತ ಕೊಂಡೊಯ್ಯುವುದಕ್ಕಾಗಿ ಸದಾ ಶ್ರಮಿಸುತ್ತಿದ್ದರು. ಅವರ ಅಧಿಕಾರಾವಧಿಯನ್ನು ಹೊಸ ನೀತಿಗಳ ಮೂಲಕ ಗುರುತಿಸಬಹುದಾಗಿದೆ. ಕುಟುಂಬ ಹಾಗೂ ಬೆಂಬಲಿಗರಿಗೆ ಸಂತಾಪಗಳು. ಓಂ ಶಾಂತಿʼ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

 

1927 ಸೆಪ್ಟೆಂಬರ್‌ 25ರಂದು ಜನಿಸಿದ ಜಗಮೋಹನ್‌,‌ 1996ರಲ್ಲಿ ಮೊದಲ ಸಲ ಸಂಸದರಾಗಿ ಆಯ್ಕೆಯಾಗಿದ್ದರು. ಜಮ್ಮು ಕಾಶ್ಮೀರ, ಗೋವಾದ ರಾಜ್ಯಪಾಲರಾಗಿ ಮತ್ತು ದೆಹಲಿಯ ಲೆಫ್ಟಿನೆಂಟ್‌ ಗವರ್ನರ್‌ ಆಗಿಯೂ ಕಾರ್ಯನಿರ್ವಹಿಸಿದ್ದರು.

 

ಅವರಿಗೆ ಪದ್ಮಶ್ರೀ (1971), ಪದ್ಮಭೂಷಣ (1977) ಮತ್ತು ಪದ್ಮ ವಿಭೂಷಣ (2016) ಗೌರವಗಳು ಸಂದಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು