ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ: ಜಾರ್ಖಂಡ್ ಮಾಜಿ ಸಚಿವ ತ್ರಿಪಾಠಿ ನಾಮಪತ್ರ ಸಲ್ಲಿಕೆ

Last Updated 30 ಸೆಪ್ಟೆಂಬರ್ 2022, 9:10 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲು ನಿರ್ಧರಿಸಿರುವ ಜಾರ್ಖಂಡ್‌ನ ಮಾಜಿ ಸಚಿವ ಕೆ.ಎನ್. ತ್ರಿಪಾಠಿ ಇಂದು (ಶುಕ್ರವಾರ) ನಾಮಪತ್ರ ಸಲ್ಲಿಸಿದ್ದಾರೆ.

ಎಐಸಿಸಿ ಕೇಂದ್ರ ಕಚೇರಿಯಲ್ಲಿ ಕಾಂಗ್ರೆಸ್‌ನ ಕೇಂದ್ರ ಚುನಾವಣಾ ಪ್ರಾಧಿಕಾರದ ಅಧ್ಯಕ್ಷ ಮಧುಸೂದನ್ ಮಿಸ್ತ್ರಿ ಅವರಿಗೆ ತ್ರಿಪಾಠಿ ನಾಮಪತ್ರ ಸಲ್ಲಿಸಿದರು.

ಕಾಂಗ್ರೆಸ್ ಅಧ್ಯಕ್ಷ ಚುನಾವಣೆ ಅಭ್ಯರ್ಥಿಯಾಗಿ ತಿರುವನಂತಪುರದ ಸಂಸದ ಶಶಿ ತರೂರ್ ಸಹ ನಾಮಪತ್ರ ಸಲ್ಲಿಸಿದ್ದಾರೆ.

ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೂಡ ನಾಮಪತ್ರ ಸಲ್ಲಿಸುವ ನಿರೀಕ್ಷೆಯಿದೆ.

ಏತನ್ಮಧ್ಯೆ ಕೊನೆಯ ಕ್ಷಣದಲ್ಲಿ ಸ್ಪರ್ಧಾ ಕಣದಿಂದ ದಿಗ್ವಿಜಯ್ ಸಿಂಗ್ ಮತ್ತು ಅಶೋಕ್ ಗೆಹಲೋತ್ ಹಿಂದಕ್ಕೆ ಸರಿದಿದ್ದಾರೆ.

ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ. ಅಕ್ಟೋಬರ್ 17ರಂದು ಚುನಾವಣೆ ನಡೆಯಲಿದ್ದು, 19ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT