ಮಂಗಳವಾರ, ಏಪ್ರಿಲ್ 20, 2021
27 °C

ಬಿಜೆಪಿ ತೆಕ್ಕೆಗೆ ನಿವೃತ್ತ ನ್ಯಾಯಮೂರ್ತಿ ಹಾಗೂ ಐಪಿಎಸ್ ಅಧಿಕಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ರವೀಂದ್ರನ್ ಮತ್ತು ಕೇರಳದ ಮಾಜಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ವೇಣುಗೋಪಾಲ್ ಕೆ. ನಾಯರ್ ಅವರು ಬಿಜೆಪಿಗೆ ಸೇರ್ಪಡೆಯಾದರು. ಕೇರಳ ಹೈಕೋರ್ಟ್‌ನ ಮತ್ತೊಬ್ಬ ನಿವೃತ್ತ ನ್ಯಾಯಾಧೀಶ ವಿ. ಚಿದಂಬರೇಶ್‌ ಕೂಡ ಶೀಘ್ರದಲ್ಲೇ ಪಕ್ಷಕ್ಕೆ ಸೇರುವ ನಿರೀಕ್ಷೆಯಿದೆ.

ಮೆಟ್ರೊಮ್ಯಾನ್ ಇ. ಶ್ರೀಧರನ್, ನಿವೃತ್ತ ಪೊಲೀಸ್ ಮಹಾನಿರ್ದೇಶಕ ಜೇಕಬ್‌ ಥಾಮಸ್ ಅವರು ಇತ್ತೀಚೆಗೆ ಬಿಜೆಪಿ ಸೇರಿದ್ದರು. ಇವರೆಲ್ಲರೂ ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಸಾಧ್ಯತೆಯಿದೆ. ರವೀಂದ್ರನ್ ಹಾಗೂ ವೇಣುಗೋಪಾಲ್ ನಾಯರ್ ಅವರು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆದರು. ಕೇರಳದಲ್ಲಿ ಅನೇಕ ಉನ್ನತ ವ್ಯಕ್ತಿಗಳು ಶೀಘ್ರದಲ್ಲೇ ಪಕ್ಷಕ್ಕೆ ಸೇರಲಿದ್ದಾರೆ ಎಂದು ಬಿಜೆಪಿ ರಾಜ್ಯ ನಾಯಕತ್ವವು ಈ ಮೊದಲೇ ಘೋಷಿಸಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು