ಬುಧವಾರ, ಮಾರ್ಚ್ 29, 2023
25 °C

ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿಗೆ ಅನಾರೋಗ್ಯ: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಕೇರಳದ ಮಾಜಿ ಮುಖ್ಯಮಂತ್ರಿ ಉಮ್ಮನ್‌ ಚಾಂಡಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದರಿಂದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾಂಗ್ರೆಸ್‌ ಹಿರಿಯ ನಾಯಕ ಚಾಂಡಿ ಅವರಿಗೆ ಭಾನುವಾರ ರಾತ್ರಿ ತೀವ್ರ ಜ್ಷರ ಕಾಣಿಸಿಕೊಂಡಿತ್ತು. ಅವರನ್ನು ನಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅವರ ಪುತ್ರ ಮಾಹಿತಿ ನೀಡಿದ್ದಾರೆ. ಸದ್ಯ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. 

ಚಾಂಡಿ ಅವರಿಗೆ ನ್ಯುಮೋನಿಯಾ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಅವರಿಗೆ 79 ವರ್ಷ ವಯಸ್ಸು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು