ಬುಧವಾರ, ಮಾರ್ಚ್ 29, 2023
23 °C

ಮಹಾರಾಷ್ಟ್ರ ಮಾಜಿ ಸಚಿವ ಅನಿಲ್‌ ದೇಶಮುಖ್‌ ಜೈಲಿನಿಂದ ಬಿಡುಗಡೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ (ಪಿಟಿಐ): ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶಮುಖ್‌ ಅವರನ್ನು ಜಾಮೀನಿನ ಮೇಲೆ ಬುಧವಾರ ಸಂಜೆ ಇಲ್ಲಿನ ಆರ್ಥರ್‌ ರೋಡ್‌ ಜೈಲಿನಿಂದ ಬಿಡುಗಡೆ ಮಾಡಲಾಯಿತು.

ಅಜಿತ್ ಪವಾರ್‌ ಸೇರಿದಂತೆ ಎನ್‌ಸಿಪಿಯ ಹಿರಿಯ ನಾಯಕರು ಅವರನ್ನು ಜೈಲಿನ ಹೊರಗೆ ಬರಮಾಡಿಕೊಂಡರು. 

ನಂತರ ಪ್ರತಿಕ್ರಿಯಿಸಿದ ದೇಶಮುಖ್‌, ‘ನ್ಯಾಯಾಂಗದ ಮೇಲೆ ಸಂಪೂರ್ಣ ನಂಬಿಕೆ ಇದೆ...ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿತ್ತು ಎನ್ನುವುದು ಹೈಕೋರ್ಟ್‌ ಗಮನಕ್ಕೆ ಬಂದಿದೆ’ ಎಂದರು.

 2021ರ ನವೆಂಬರ್‌ನಿಂದ ದೇಶ್‌ಮುಖ್‌ ಜೈಲಿನಲ್ಲಿದ್ದರು.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು