ಮಹಾರಾಷ್ಟ್ರದ ಮಾಜಿ ಸಚಿವ ವಿಲಾಸ್ ಪಾಟೀಲ್ ಉಂಡಲ್ಕರ್ ನಿಧನ
ಸತಾರಾ: ಮಹಾರಾಷ್ಟ್ರದ ಮಾಜಿ ಸಚಿವ, ಕಾಂಗ್ರೆಸ್ ಹಿರಿಯ ನಾಯಕ ವಿಲಾಸ್ ಪಾಟೀಲ್ ಉಂಡಲ್ಕರ್ (82) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾದರು. ಕೆಲಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ವಿಲಾಸ್ ಪಾಟೀಲ್ ಅವರು ‘ಕಾಕಾ’ ಎಂದೇ ಜನಪ್ರಿಯತೆ ಪಡೆದಿದ್ದರು. ಅವರು 2014ರ ತನಕ ಕರಾಡ್–ದಕ್ಷಿಣ ವಿಧಾನಸಭಾ ಕ್ಷೇತ್ರದಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. 2014ರಲ್ಲಿ ಕಾಂಗ್ರೆಸ್ ಅವರಿಗೆ ಸ್ಪರ್ಧೆಗೆ ಅವಕಾಶ ನೀಡಿರಲಿಲ್ಲ.
ಕಾಂಗ್ರೆಸ್ ನೇತೃತ್ವದ ಸರ್ಕಾರ ಆಡಳಿತದಲ್ಲಿರುವಾಗ ವಿಲಾಸ್ ಅವರು ಕಾನೂನು, ನ್ಯಾಯ ಮತ್ತು ಸಹಕಾರಿ ಇಲಾಖೆಗಳ ಸಚಿವರಾಗಿದ್ದರು. ಅಂತ್ಯಕ್ರಿಯೆ ಸತಾರಾ ಜಿಲ್ಲೆಯ ಅವರ ಸ್ವಗ್ರಾಮ ಉಂಡಾಲೆಯಲ್ಲಿ ನಡೆಯಿತು.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.