ಭಾನುವಾರ, ಸೆಪ್ಟೆಂಬರ್ 25, 2022
20 °C

ಎನ್‌ಸಿಬಿಯ ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಕೊಲೆ ಬೆದರಿಕೆ

ಪ್ರಜಾವಾಣಿ ವೆಬ್ ಡೆ‌ಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಮಾದಕ ದ್ರವ್ಯ ನಿಯಂತ್ರಣ ದಳದ (ಎನ್‌ಸಿಬಿ) ಮಾಜಿ ಅಧಿಕಾರಿ ಸಮೀರ್ ವಾಂಖೆಡೆಗೆ ಸಾಮಾಜಿಕ ಮಾಧ್ಯಮದಲ್ಲಿ ಕೊಲೆ ಬೆದರಿಕೆಯೊಡ್ಡಲಾಗಿದೆ.

ಸಮೀರ್ ವಾಂಖೆಡೆ ಅವರಿಗೆ ಕೊಲೆ ಬೆದರಿಕೆಯೊಡ್ಡಲಾಗಿದೆ. ಈ ಕುರಿತು ಅವರು ಗೋರೆಗಾಂವ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ‘ಎಎನ್‌ಐ’ ಸುದ್ದಿ ಸಂಸ್ಥೆ ಟ್ವೀಟ್ ಮಾಡಿದೆ.

ಮುಂಬೈಯಲ್ಲಿ ಐಷಾರಾಮಿ ಹಡಗಿನಲ್ಲಿ ಡ್ರಗ್ಸ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ತಂಡದಲ್ಲಿ ವಾಂಖೆಡೆ ಸಹ ಇದ್ದರು. ಇತ್ತೀಚೆಗಷ್ಟೇ ಇವರ ವಿರುದ್ಧ ಸರ್ಕಾರಿ ನೌಕರಿ ಪಡೆಯಲು ನಕಲಿ ಜಾತಿ ಪ್ರಮಾಣಪತ್ರ ಸಲ್ಲಿಸಿದ್ದಾರೆ ಎಂಬ ಆರೋಪವೂ ದಾಖಲಾಗಿತ್ತು. ಆದರೆ, ಪ್ರಕರಣದಲ್ಲಿ ಅವರಿಗೆ ಕಳೆದ ವಾರ ಕ್ಲೀನ್‌ಚಿಟ್ ದೊರೆತಿತ್ತು.

ಮಹಾರಾಷ್ಟ್ರ ಸಚಿವ ಮಲಿಕ್ ವಿರುದ್ಧ ಸಮೀರ್‌ ವಾಂಖೆಡೆ ಸಹೋದರಿ ಯಾಸ್ಮೀನ್ ದೂರು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು