ನವದಹೆಲಿ: ಕೋವಿಡ್ ಸೋಂಕಿಗೆ ತುತ್ತಾಗಿ ದೆಹಲಿಯ ಏಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಚೇತರಿಸಿಕೊಂಡಿದ್ದು, ಗುರುವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಸೋಂಕು ಕಾಣಿಸಿಕೊಂಡ ಕಾರಣಕ್ಕೆ ಏ.19ರಂದು ಆಸ್ಪತ್ರೆಗೆ ದಾಖಲಾಗಿದ್ದರು.

ಈ ಕುರಿತು ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್, ‘ಮನಮೋಹನ್ ಸಿಂಗ್ ಅವರ ಆರೋಗ್ಯ ಸ್ಥಿರವಾಗಿದೆ. ಅವರ ಆರೋಗ್ಯದ ಕುರಿತ ಎಲ್ಲ ವಿವರವನ್ನು ತಜ್ಞ ವೈದ್ಯರ ಜತೆ ಚರ್ಚಿಸಲಾಗಿದೆ’ ಎಂದು ಹೇಳಿದ್ದರು.

ಇತ್ತೀಚೆಗೆ ದೇಶದಲ್ಲಿ ಕೋವಿಡ್ ಲಸಿಕೆ ಕಾರ್ಯಕ್ರಮವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವಂತೆ ಮನಮೋಹನ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದರು.

ಇದನ್ನೂ ಓದಿ... ಜಿಲ್ಲಾಧಿಕಾರಿ ದೂರದೃಷ್ಟಿ; ಕೋವಿಡ್ 2ನೇ ಅಲೆಗೆ ಮುನ್ನ ಆಮ್ಲಜನಕ ಘಟಕ ಸ್ಥಾಪನೆ!

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.