ಶುಕ್ರವಾರ, ಮೇ 7, 2021
27 °C

ಮಾಜಿ ಪ್ರಧಾನಿ ಮನಮೋಹನ್ ಸಿಂಗ್‌ಗೆ ಕೋವಿಡ್-19 ದೃಢ, ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ನಡೆಸಿದ ಪರೀಕ್ಷೆಯಲ್ಲಿ ಕೋವಿಡ್-19 ಸೋಂಕು ತಗುಲಿರುವುದು ದೃಢಪಟ್ಟಿದೆ. 

ಜ್ವರದಿಂದ ಬಳಲುತ್ತಿದ್ದ ಅವರನ್ನು ಏಮ್ಸ್‌ ಆಸ್ಪತ್ರೆಗೆ ಸೋಮವಾರ ಮಧ್ಯಾಹ್ನ ದಾಖಲಿಸಲಾಗಿತ್ತು. 
88 ವರ್ಷದ ಸಿಂಗ್ ಅವರನ್ನು ಕೋವಿಡ್ ಸೌಲಭ್ಯಕ್ಕೆ ಮೀಸಲಾಗಿರುವ ಇಲ್ಲಿನ ಏಮ್ಸ್‌ನ ಟ್ರಾಮಾ ಕೇಂದ್ರಕ್ಕೆ ದಾಖಲಿಸಲಾಗಿದೆ. ಸದ್ಯ ವೈದ್ಯರು ನಿಗಾ ವಹಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿಂಗ್ ಅವರಿಗೆ ಬೆಳಿಗ್ಗೆ ಲಘು ಜ್ವರ ಇತ್ತು ಮತ್ತು ನಂತರ ನಡೆಸಿದ ಪರೀಕ್ಷೆಯಲ್ಲಿ ಅವರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಅವರು ಹೇಳಿದರು. 

ಕೋವಿಡ್-19 ಲಸಿಕೆಯ ಎರಡೂ ಡೋಸ್‌ಗಳನ್ನು ಸಿಂಗ್ ತೆಗೆದುಕೊಂಡಿದ್ದರು.

'ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸುತ್ತೇನೆ. ಈ ಕಷ್ಟದ ಸಮಯದಲ್ಲಿ ಭಾರತಕ್ಕೆ ನಿಮ್ಮ ಮಾರ್ಗದರ್ಶನ ಮತ್ತು ಸಲಹೆಯ ಅಗತ್ಯವಿದೆ' ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ಮುಖ್ಯಮಂತ್ರಿಗಳಾದ ಅಶೋಕ್ ಗೆಹ್ಲೋಟ್, ಅಮರಿಂದರ್ ಸಿಂಗ್ ಮತ್ತು ಮಮತಾ ಬ್ಯಾನರ್ಜಿ, ಸಮಾಜವಾದಿ ಪಕ್ಷದ ಅಖಿಲೇಶ್ ಯಾದವ್, ಬಿಜೆಪಿ ನಾಯಕ ಹಿಮಂತ್ ಬಿಸ್ವಾ ಶರ್ಮಾ, ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಮತ್ತು ಹಲವಾರು ನಾಯಕರು ಸಿಂಗ್ ಅವರ ಆರೋಗ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿದರು ಮತ್ತು ಅವರು ಶೀಘ್ರದಲ್ಲೇ ಚೇತರಿಸಿಕೊಳ್ಳುತ್ತಾರೆ ಎಂಬ ಭರವಸೆ ವ್ಯಕ್ತಪಡಿಸಿದರು.

ಪ್ರಿಯಾಂಕ ಗಾಂಧಿ ವಾದ್ರಾ ಟ್ವೀಟ್ ಮಾಡಿ, 'ನನ್ನ ಪ್ರಾರ್ಥನೆಗಳು ಇಂದು ಮನಮೋಹನ್ ಸಿಂಗ್ ಜಿ ಮತ್ತು ಅವರ ಕುಟುಂಬದೊಂದಿಗಿದೆ. ಈ ರೋಗದ ವಿರುದ್ಧ ತನ್ನೆಲ್ಲಾ ಶಕ್ತಿಯಿಂದ ಹೋರಾಡಲಿ ಮತ್ತು ಬೇಗನೆ ಗುಣಮುಖರಾಗಲಿ' ಎಂದು ಹೇಳಿದ್ದಾರೆ.

'ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಜಿ ಅವರು ಕೋವಿಡ್ ಪಾಸಿಟಿವ್ ಆಗಿದ್ದಾರೆ ಎನ್ನುವ ಸುದ್ದಿ ಲಭ್ಯವಾಗಿದೆ. ಸರ್, ತ್ವರಿತ ಮತ್ತು ಪೂರ್ಣ ಚೇತರಿಕೆಗಾಗಿ ನಾವು ಪ್ರಾರ್ಥಿಸುತ್ತೇವೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು