ಶುಕ್ರವಾರ, ಅಕ್ಟೋಬರ್ 2, 2020
21 °C

ಸಕಲ ಗೌರವಗಳೊಂದಿಗೆ ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅಂತ್ಯಸಂಸ್ಕಾರ

ಪಿಟಿಐ Updated:

ಅಕ್ಷರ ಗಾತ್ರ : | |

ದೆಹಲಿ: ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಲೋಧಿ ರಸ್ತೆ ವಿದ್ಯುತ್ ಚಿತಾಗಾರದಲ್ಲಿ ಮಂಗಳವಾರ ನೆರವೇರಿತು.

ಪ್ರಣವ್‌ ಮುಖರ್ಜಿ ಅವರ ಪುತ್ರ ಅಭಿಜಿತ್‌ ಮುಖರ್ಜಿ ಅವರು ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸಿದರು.

ಕೋವಿಡ್‌ ಶಿಷ್ಟಾಚಾರದ ಕಾರಣದಿಂದಾಗಿ ಮುಖರ್ಜಿ ಸಂಬಂಧಿಕರು ವೈಯಕ್ತಿಕ ರಕ್ಷಣಾ ಕವಚ (ಪಿಪಿಇ ಕಿಟ್‌) ಧರಿಸಿಯೇ ಅಂತಿಮ ನಮನ ಸಲ್ಲಿಸಬೇಕಾಯಿತು.

ಮಾಜಿ ರಾಷ್ಟ್ರಪತಿಗೆ ಸೇನೆಯ ತುಕಡಿಯು ಗುಂಡು ಹಾರಿಸುವ ಮೂಲಕ ನಮನ ಸಲ್ಲಿಸಿತು.

ಮಿದುಳು ಶಸ್ತ್ರಚಿಕಿತ್ಸೆ, ಕೋವಿಡ್‌–19, ಶ್ವಾಸಕೋಶದ ಸೋಂಕು ಸೇರಿದಂತೆ ಹಲವು ಸಮಸ್ಯೆಗಳ ಹಿನ್ನೆಲೆಯಲ್ಲಿ ಕಳೆದ 21 ದಿನಗಳಿಂದ ದೆಹಲಿಯ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣವ್‌ ಮುಖರ್ಜಿ (84) ಸೋಮವಾರ ಸಂಜೆ ಇಹಲೋಕ ತ್ಯಜಿಸಿದರು.

ಇವುಗಳನ್ನು ಓದಿ: 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು