ಶನಿವಾರ, ಸೆಪ್ಟೆಂಬರ್ 26, 2020
22 °C

ಪ್ರಣಬ್ ಮುಖರ್ಜಿಗೆ‌ ಮಿದುಳು ಶಸ್ತ್ರಚಿಕಿತ್ಸೆ; ಆರೋಗ್ಯ ಸ್ಥಿತಿ ಗಂಭೀರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಅವರು ದೆಹಲಿಯಲ್ಲಿ ಸೇನೆಯ ರಿಸರ್ಚ್ ಆ್ಯಂಡ್ ರೆಫೆರಲ್ ಆಸ್ಪತ್ರೆಯಲ್ಲಿ ಮಿದುಳು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಆದರೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ವೆಂಟಿಲೇಟರ್ ಸಹಕಾರ ನೀಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಮಿದುಳಿನಲ್ಲಿ ಹೆಪ್ಪುಗಟ್ಟಿದ ರಕ್ತ ತೆಗೆಯಲು ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಶಸ್ತ್ರಚಿಕಿತ್ಸೆಗೂ ಮುನ್ನ ನಡೆಸಲಾದ ಕೋವಿಡ್ ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ದೃಢಪಟ್ಟಿದೆ. ಆ ಬಗ್ಗೆ ಪ್ರಣಬ್ ಮುಖರ್ಜಿ ಅವರೇ ಟ್ವೀಟಿಸಿದ್ದರು.

2012-2017ರ ವರೆಗೂ ಪ್ರಣಬ್ ಮುಖರ್ಜಿ ದೇಶದ ರಾಷ್ಟ್ರಪತಿಯಾಗಿ‌ ಸೇವೆ ಸಲ್ಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು