ಶನಿವಾರ, ಮೇ 21, 2022
26 °C

ಆರ್‌ಜೆಡಿ ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೋವಿಡ್‌ನಿಂದ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ಮಾಜಿ ಸಂಸದ ಮೊಹಮ್ಮದ್‌ ಶಹಾಬುದ್ದಿನ್‌ ಕೋವಿಡ್‌ನಿಂದ ಶನಿವಾರ ಬೆಳಗ್ಗೆ ಮೃತಪಟ್ಟಿದ್ದಾರೆ.

ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅವರು ಇಲ್ಲಿನ ತಿಹಾರ್‌ ಕಾರಾಗೃಹದಲ್ಲಿ ಜೈಲು ಶಿಕ್ಷೆ ಅನುಭವಿಸುತ್ತಿದ್ದರು. ಕೋವಿಡ್‌ ಸೋಂಕಿಗೆ ಒಳಗಾಗಿದ್ದ ಮೊಹಮ್ಮದ್‌ ಶಹಾಬುದ್ದಿನ್‌ಗೆ ಸೂಕ್ತ ಚಿಕಿತ್ಸೆ ನೀಡುವಂತೆ ಹೈಕೋರ್ಟ್‌ ದೆಹಲಿ ಸರ್ಕಾರಕ್ಕೆ ಶುಕ್ರವಾರ ಸೂಚನೆ ನೀಡಿತ್ತು.

ಶುಕ್ರವಾರ ಸಂಜೆ ಮೊಹಮ್ಮದ್‌ ಶಹಾಬುದ್ದಿನ್‌ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗಿದೆ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

2004 ರಲ್ಲಿ ಶಹಾಬುದ್ದಿನ್‌ ತನ್ನ ಸಹಚರರು ಜತೆ ಸೇರಿ ಸಹೋದರರಾದ ಗಿರೀಶ್‌ ಮತ್ತು ಸತೀಶ್‌ ಎಂಬುವರ ಮೇಲೆ ಆ್ಯಸೀಡ್‌ ಸುರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.

ಶಹಾಬುದ್ದಿನ್‌ ಮೇಲಿದ್ದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ 2017ರಲ್ಲಿ ನ್ಯಾಯಾಲಯ ಜೀವಾಧಿ ಶಿಕ್ಷೆ ನೀಡಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು