ಸೋಮವಾರ, ಏಪ್ರಿಲ್ 19, 2021
32 °C

ಕೋವಿಡ್‌ನಿಂದ ಬಳಲುತ್ತಿದ್ದ ಮಾಜಿ ಕೇಂದ್ರ ಸಚಿವ ದಿಲೀಪ್ ಗಾಂಧಿ ನಿಧನ

ಏಜೆನ್ಸೀಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಕೇಂದ್ರ ಸಚಿವ ಹಾಗೂ ಭಾರತೀಯ ಜನತಾ ಪಕ್ಷದ (ಬಿಜೆಪಿ) ನಾಯಕ ದಿಲೀಪ್ ಗಾಂಧಿ ಬುಧವಾರ ನಿಧನ ಹೊಂದಿದ್ದಾರೆ.

ಕೋವಿಡ್-19 ಸೋಂಕಿನಿಂದ ಬಳಲುತ್ತಿದ್ದ 70 ವರ್ಷದ ದಿಲೀಪ್ ಗಾಂಧಿ ಅವರನ್ನು ದೆಹಲಿಯ ಖಾಸಗಿ ಆಸತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ: 

ಆದರೆ ಚಿಕಿತ್ಸೆಗೆ ಸ್ಪಂದಿಸದೆ ಬುಧವಾರ ಬೆಳಗ್ಗೆ ನಿಧನ ಹೊಂದಿದ್ದಾರೆ.

 

 

 

ಮಧ್ಯಪ್ರದೇಶದ ಅಹ್ಮದ್‌ನಗರ ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಮೂರು ಬಾರಿ ಗೆದ್ದಿರುವ ಮಾಜಿ ಸಂಸದ ದಿಲೀಪ್ ಗಾಂಧಿ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಆಡಳಿತದಲ್ಲಿ ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು.

 

1999ನೇ ಇಸವಿಯಲ್ಲಿ ಮೊದಲ ಬಾರಿಗೆ ಸಂಸತ್ತಿಗೆ ಆಯ್ಕೆಯಾಗಿರುವ ದಿಲೀಪ್ ಗಾಂಧಿ, ಬಳಿಕ 2009 ಮತ್ತು 2014ರಲ್ಲೂ ಗೆದ್ದಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು