ಭಾನುವಾರ, ಜೂನ್ 13, 2021
23 °C

ಕೇಂದ್ರದ ಮಾಜಿ ಸಚಿವ, ಆರ್‌ಎಲ್‌ಡಿ ಮುಖ್ಯಸ್ಥ ಅಜಿತ್ ಸಿಂಗ್‌ ಕೋವಿಡ್‌ನಿಂದ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರದ ಮಾಜಿ ಸಚಿವ, ರಾಷ್ಟ್ರೀಯ ಲೋಕ ದಳ (ಆರ್‌ಎಲ್‌ಡಿ) ಮುಖ್ಯಸ್ಥ ಅಜಿತ್‌ ಸಿಂಗ್‌ ಅವರು ಕೋವಿಡ್‌ನಿಂದ ಗುರುವಾರ ನಿಧನರಾಗಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದ ಅಜಿತ್‌ ಸಿಂಗ್‌ ಅವರನ್ನು ಉತ್ತರ ಪ್ರದೇಶದ ಗುರುಗ್ರಾಮದ ಖಾಸಗಿ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿತ್ತು. ಅವರಿಗೆ ಕೋವಿಡ್‌ ಸೋಂಕು ತಗುಲಿರುವುದು ಏ.20ರಂದು ದೃಢಪಟ್ಟಿತ್ತು.

ಅಜಿತ್ ಸಿಂಗ್‌ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವರು ಟ್ವಿಟರ್‌ ಮೂಲಕ ಸಂತಾಪ ಸೂಚಿಸಿದ್ದಾರೆ.

‘ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್ ಸಿಂಗ್ ಅವರ ನಿಧನ ಅತ್ಯಂತ ನೋವಿನ ಸಂಗತಿಯಾಗಿದೆ. ಅವರು ಯಾವಾಗಲೂ ರೈತರ ಹಿತಾಸಕ್ತಿಗಳಿಗೆ ಹೆಚ್ಚು ಸಮಯ ಮೀಸಲಿಟ್ಟಿದ್ದರು. ಕೇಂದ್ರದಲ್ಲಿ ಹಲವಾರು ಇಲಾಖೆಗಳ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದ್ದರು. ಕುಟುಂಬಸ್ಥರು, ಬೆಂಬಲಿಗರಿಗೆ ಈ ನೋವು ಭರಿಸಲು ದೇವರು ಶಕ್ತಿ ನೀಡಲಿ’ ಎಂದು ಮೋದಿ ಟ್ವೀಟ್‌ ಮಾಡಿದ್ದಾರೆ.

‘ರಾಷ್ಟ್ರೀಯ ಲೋಕ ದಳದ ಮುಖ್ಯಸ್ಥ ಅಜಿತ್ ಸಿಂಗ್ ಜಿ ಅವರ ಅಕಾಲಿಕ ನಿಧನದ ಸುದ್ದಿ ನೋವಿನ ಸಂಗತಿಯಾಗಿದೆ. ಅವರ ಕುಟುಂಬ ಮತ್ತು ಪ್ರೀತಿಪಾತ್ರರಿಗೆ ನನ್ನ ಸಂತಾಪ’ ಎಂದು ರಾಹುಲ್‌ ಗಾಂಧಿ ಟ್ವೀಟ್ ಮಾಡಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು