ಸೋಮವಾರ, ಮಾರ್ಚ್ 20, 2023
30 °C

ಐಸಿಯುನಲ್ಲಿ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಲಖನೌ: ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಕಲ್ಯಾಣ್‌ ಸಿಂಗ್‌ (89) ಚಿಕಿತ್ಸೆಗಾಗಿ ಭಾನುವಾರ ಸಂಜೆ ಸಂಜಯ್‌ ಗಾಂಧಿ ವೈದ್ಯಕೀಯ ವಿಜ್ಞಾನಗಳ ಸ್ನಾತಕೋತ್ತರ ಸಂಸ್ಥೆಯ ಐಸಿಯುಗೆ ದಾಖಲಾಗಿದ್ದಾರೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಆಸ್ಪತ್ರೆಯ ಪ್ರಕಟಣೆಯ ಪ್ರಕಾರ, ಹೃದ್ರೋಗ, ಮೂತ್ರಪಿಂಡ ಶಾಸ್ತ್ರ, ನರವಿಜ್ಞಾನ ಸೇರಿದಂತೆ ಹಲವು ವಿಭಾಗಗಳ ತಜ್ಞರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ತಜ್ಞ ವೈದ್ಯರು ಕಲ್ಯಾಣ್‌ ಸಿಂಗ್‌ ಅವರ ಆರೋಗ್ಯದ ಮೇಲೆ ನಿಗಾ ಇರಿಸಿದ್ದಾರೆ.

ರಾಜಸ್ಥಾನದ ಮಾಜಿ ರಾಜ್ಯಪಾಲ, ಬಿಜೆಪಿ ಮುಖಂಡ ಕಲ್ಯಾಣ್‌ ಸಿಂಗ್‌, ಕಳೆದ ಎರಡು ವಾರಗಳಿಂದ ಅನಾರೋಗ್ಯ ಪೀಡಿತರಾಗಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ಸಂಜೆ 5:30ರ ಸುಮಾರಿಗೆ ಅವರು ಸಂಜಯ್‌ ಗಾಂಧಿ ಇನ್‌ಸ್ಟಿಟ್ಯೂಟ್‌ನ ಐಸಿಯುಗೆ ದಾಖಲಾಗಿದ್ದಾರೆ. 'ರಕ್ತದೊತ್ತಡ ಮತ್ತು ಹೃದಯ ಬಡಿತ ಸಹಜವಾಗಿದೆ, ಆದರೆ ಪ್ರಜ್ಞೆ ಕ್ಷೀಣಿಸಿದೆ' ಎಂದು ಭಾನುವಾರದ ಪ್ರಕಟಣೆ ತಿಳಿಸಿದೆ.

ಇದಕ್ಕೂ ಮುನ್ನ ಅವರು ಡಾ.ರಾಮ್‌ ಮನೋಹರ್ ಲೋಹಿಯಾ ವೈದ್ಯಕೀಯ ವಿಜ್ಞಾನಗಳ ಇನ್‌ಸ್ಟಿಟ್ಯೂಟ್‌ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಕೇಂದ್ರದ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಉಪಮುಖ್ಯಮಂತ್ರಿ ಕೇಶವ್‌ ಪ್ರಸಾದ್‌ ಮೌರ್ಯ ಸೇರಿದಂತೆ ಹಲವು ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ, ಕಲ್ಯಾಣ್ ಸಿಂಗ್‌ ಅವರ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದ್ದರು.

ಇದನ್ನೂ ಓದಿ: 2022ರ ಚುನಾವಣೆಯಲ್ಲಿ 300ಕ್ಕೂ ಅಧಿಕ ಸ್ಥಾನಗಳಲ್ಲಿ ಗೆಲುವು ಖಚಿತ: ಆದಿತ್ಯನಾಥ್

1992ರಲ್ಲಿ ಕರಸೇವಕರು ಬಾಬರಿ ಮಸೀದಿ ನೆಲಸಮಗೊಳಿಸಿದ ಸಂದರ್ಭದಲ್ಲಿ ಕಲ್ಯಾಣ್ ಸಿಂಗ್ ಉತ್ತರ ಪ್ರದೇಶದ ಮುಖ್ಯಮಂತ್ರಿ ಆಗಿದ್ದರು. ಇದೇ ಕಾರಣಕ್ಕೆ ನ್ಯಾಯಾಂಗ ನಿಂದನೆಯ ವಿಚಾರವಾಗಿ ಸುಪ್ರೀಂ ಕೋರ್ಟ್ ಸಿಂಗ್‌ ಅವರಿಗೆ ದಂಡ ವಿಧಿಸಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು