ಮಂಗಳವಾರ, ಏಪ್ರಿಲ್ 13, 2021
23 °C
ಜಮ್ಮು– ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಘಟನೆ

ಬಾಲಕಿ ಮೇಲೆ ಅತ್ಯಾಚಾರ: ಪೊಲೀಸ್‌ ಸೇರಿ ನಾಲ್ವರ ಬಂಧನ

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ನಡೆದ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬರು ‘ಮಹಿಳೆಯೊಬ್ಬರ ನೆರವಿನಿಂದ ಬೊನಿಗಾಮ್ ಖಾಜಿಗುಂಡ್‌ನಲ್ಲಿ ತನ್ನ ಮಗಳ ಮೇಲೆ ಮೂವರು ಅತ್ಯಾಚಾರವೆಸಗಿದ್ದಾರೆ‘ ಎಂದು ಖಾಜಿಗುಂಡ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

‘ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ, ಆಕೆ ಗರ್ಭಿಣಿಯಾಗಿದ್ದಾಗಿ ತಿಳಿದುಬಂತು. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವುದು ಬೆಳಕಿಗೆ ಬಂತು’ ಎಂದು ದೂರಿನಲ್ಲಿ ಉಲ್ಲೇಖಿಸಿರುವುದಾಗಿ ಪೊಲೀಸ್ ಇಲಾಖೆ ವಕ್ತಾರರು ತಿಳಿಸಿದ್ದಾರೆ.

ಆರೋಪಿಗಳನ್ನು ಝಹೂರ್ ಅಹ್ಮದ್‌ ಮಿರ್‌, ಏಜಾಜ್‌ ಅಹ್ಮದ್ ಶಾ, ಕಿಫಾಯತ್ ಅಹ್ಮದ್‌ ಮಲಿಕ್‌ ಮತ್ತು ಶಬ್ರೂಝಾ ಎಂದು ಗುರುತಿಸಲಾಗಿದೆ. ಈ ಮೂವರಲ್ಲಿ ಪೊಲೀಸ್ ಇಲಾಖೆಗೆ ಸೇರಿದವರು ಯಾರು ಎಂಬುದನ್ನು ಪೊಲೀಸರು ಬಹಿರಂಗಪಡಿಸಿಲ್ಲ.

‘ಈ ಪ್ರಕರಣದಲ್ಲಿ ಆರೋಪಿಯಾಗಿರುವ ಪೊಲೀಸ್ ಕಾನ್‌ಸ್ಟೆಬಲ್ ಅತ್ಯಾಚಾರ ನಡೆದ ಸಮಯದಲ್ಲಿ ಕರ್ತವ್ಯ ಮೇಲೆ ಇರಲಿಲ್ಲ. ಪೊಲೀಸ್ ಕಾನ್‌ಸ್ಟೆಬಲ್ ವಿರುದ್ಧ ಇಲಾಖಾ ತನಿಖೆ ನಡೆಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು