ಸೋಮವಾರ, ಆಗಸ್ಟ್ 8, 2022
23 °C

ಬಿಹಾರ: ಆರ್‌ಜೆಡಿ ಸೇರಿದ ನಾಲ್ವರು ಎಐಎಂಐಎಂ ಶಾಸಕರು

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಪಟ್ನಾ: ಬಿಹಾರದ ನಾಲ್ವರು ಎಐಎಂಐಎಂ ಶಾಸಕರು ಲಾಲು ಪ್ರಸಾದ್ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳಕ್ಕೆ (ಆರ್‌ಜೆಡಿ) ಬುಧವಾರ ಸೇರ್ಪಡೆಯಾಗಿದ್ದಾರೆ.  

ಈ ವಿಚಾರವಾಗಿ ಟ್ವೀಟ್‌ ಮಾಡಿರುವ ಸುದ್ದಿಸಂಸ್ಥೆ ‘ಎಎನ್‌ಐ’, ‘ಬಿಹಾರದ ನಾಲ್ವರು ಎಐಎಂಐಎಂ ಶಾಸಕರಾದ ಶಹನವಾಜ್, ಮಹಮ್ಮದ್ ಅನ್ಜಾರ್ ನಯೀಮಿ, ಮಹಮ್ಮದ್ ಇಝಾರ್ ಅಸ್ಫಿ ಮತ್ತು ಸೈಯದ್ ರುಕ್ನುದ್ದೀನ್ ಇಂದು ಆರ್‌ಜೆಡಿಗೆ ಸೇರ್ಪಡೆಯಾಗಿದ್ದಾರೆ’ ಎಂದು ತಿಳಿಸಿದ್ದಾರೆ.

ಈ ಕುರಿತು ಹೇಳಿಕೆ ನೀಡಿರುವ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌, ‘ಬಿಹಾರದ ಐವರು ಎಐಎಂಐಎಂ ಶಾಸಕರ ಪೈಕಿ ನಾಲ್ವರು ಇಂದು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನಾವು ಅವರನ್ನು ಸ್ವಾಗತಿಸುತ್ತೇವೆ. ಬಿಹಾರ ವಿಧಾನಸಭೆಯಲ್ಲಿ ನಮ್ಮದೇ ದೊಡ್ಡ ಪಕ್ಷವಾಗಿದೆ’ ಎಂದು ಹೇಳಿದ್ದಾರೆ.

ಬಿಹಾರ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಎಐಎಂಐಎಂ ಮುಸ್ಲಿಂ ಪ್ರಾಬಲ್ಯವಿರುವ ಪ್ರದೇಶಗಳಲ್ಲಿ  ಐದು ಸೀಟುಗಳನ್ನು ಗೆದ್ದುಕೊಂಡಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು