ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್‌ಎಸ್‌ಎಸ್‌: ನಾಲ್ಕು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಆರಂಭ

Last Updated 16 ಅಕ್ಟೋಬರ್ 2022, 14:53 IST
ಅಕ್ಷರ ಗಾತ್ರ

ಪ್ರಯಾಗರಾಜ್‌ (ಉತ್ತರಪ್ರದೇಶ): ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ನಾಲ್ಕು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿಯು ಇಲ್ಲಿನ ಗೌಹಾನಿಯಾದಲ್ಲಿ ಭಾನುವಾರ ಆರಂಭಗೊಂಡಿದೆ.

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಪಾಲ್ಗೊಂಡಿದ್ದರು. ಕಾರ್ಯಕಾರಿಣಿಯಲ್ಲಿ ಸಂಘದ ಚಟುವಟಿಕೆಗಳನ್ನು ವಿಸ್ತರಿಸುವ ಕುರಿತು ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ನಾಗಪುರದಲ್ಲಿ ಈಚೆಗೆ ನಡೆದಿದ್ದ ವಿಜಯದಶಮಿ ಕಾರ್ಯಕ್ರಮದಲ್ಲಿ ಮೋಹನ್‌ ಭಾಗವತ್‌ ಅವರು, ಮಾತೃಭಾಷೆಯಲ್ಲಿ ಶಿಕ್ಷಣ, ಜನಸಂಖ್ಯೆ ಅಸಮತೋಲನ, ಸಾಮಾಜಿಕ ಸಾಮರಸ್ಯ ಸೇರಿದಂತೆ ಅನೇಕ ವಿಚಾರಗಳ ಕುರಿತು ಮಾತನಾಡಿದ್ದರು. ಇವುಗಳ ಕುರಿತು ಕಾರ್ಯಕಾರಣಿಯಲ್ಲಿ ಚರ್ಚೆ ನಡೆಯಲಿದೆ ಎಂದಿವೆ.

ಈಚೆಗೆ ನಿಧನರಾದ ಪ್ರಮುಖ ವ್ಯಕ್ತಿಗಳಿಗೆ ಕಾರ್ಯಕಾರಿಣಿಯ ಮೊದಲ ದಿನ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT