ಶನಿವಾರ, ಡಿಸೆಂಬರ್ 3, 2022
20 °C

ಕೇರಳ: ಚಲಿಸುತ್ತಿರುವ ಕಾರಿನಲ್ಲಿ ರೂಪದರ್ಶಿ ಮೇಲೆ ಗ್ಯಾಂಗ್‌ರೇಪ್, ನಾಲ್ವರ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: 19 ವರ್ಷದ ರೂಪದರ್ಶಿ ಮೇಲೆ ಚಲಿಸುತ್ತಿರುವ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೇರಳದ ಕೊಚ್ಚಿಯಲ್ಲಿ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಓರ್ವ ಮಹಿಳೆ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಗುರುವಾರ ರಾತ್ರಿ ಕೊಡುಂಗಲ್ಲೂರು ಮೂಲದ ಆರೋಪಿಗಳು ಕಾಸರಗೋಡು ಮೂಲದ ಯುವತಿ ಮೇಲೆ ಕಾರಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಕೊಚ್ಚಿ ನಗರ ಪೊಲೀಸ್ ಆಯುಕ್ತ ಸಿ.ಎಚ್. ನಾಗರಾಜು ತಿಳಿಸಿದ್ದಾರೆ.

ಇದನ್ನೂ ಓದಿ: 

ರಾಜಸ್ಥಾನ ಮೂಲದ ಆರೋಪಿ ಮಹಿಳೆ, ಸಂತ್ರಸ್ತೆ ಯುವತಿಗೆ ಪರಿಚಿತಳಾಗಿದ್ದು, ಇಲ್ಲಿ ರೂಪದರ್ಶಿಯಾಗಿ ಕೆಲಸ ಮಾಡುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.

ಯುವತಿಯನ್ನು ಅಪಹರಿಸಿ ಮಾನವ ಕಳ್ಳ ಸಾಗಾಣಿಕೆ ಮಾಡುವ ಯತ್ನದ ಬಗ್ಗೆಯೂ ಶಂಕಿಸಲಾಗಿದೆ. ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕಾಕನಾಡ್‌ನಲ್ಲಿ ವಾಸಿಸುವ ಸಂತ್ರಸ್ತೆಯನ್ನು ಡಿಜೆ ಪಾರ್ಟಿಗಾಗಿ ಕರೆದ ರಾಜಸ್ಥಾನದ ಮೂಲದ ಆರೋಪಿ ಮಹಿಳೆ, ಇತರೆ ಮೂವರು ವ್ಯಕ್ತಿಗಳಿಗೆ ಪರಿಚಯ ಮಾಡಿಕೊಟ್ಟಿದ್ದಳು. ರಾತ್ರಿ ಬಾರ್‌ನಲ್ಲಿ ಮದ್ಯ ಸೇವಿಸಿದ ಬಳಿಕ ವಾಹನದಲ್ಲಿ ಕರೆದೊಯ್ದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಬಳಿಕ ಕಾಕನಾಡ್‌ನಲ್ಲಿ ಆಕೆಯನ್ನು ಬಿಟ್ಟು ಹೋಗಿದ್ದಾರೆ.

ಶುಕ್ರವಾರ ಬೆಳಿಗ್ಗೆ ಸಂತ್ರಸ್ತೆಯನ್ನು ಆಕೆಯ ಸಹವರ್ತಿ ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ವೈದ್ಯಕೀಯ ತಪಾಸಣೆ ವೇಳೆ ಸಂತ್ರೆಸ್ತೆಗೆ ಗಾಯವಾಗಿರುವುದು ಪತ್ತೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು