ಬಸ್ಸಿಗೆ ಹಿಂಬದಿಯಿಂದ ಕಾರು ಡಿಕ್ಕಿ: ನಾಲ್ವರ ಸಾವು

ಪಾಲ್ಘರ್: ಕಾರು, ಬಸ್ಸಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ–ಅಹಮದಾಬಾದ್ ಹೆದ್ದಾರಿಯಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಐಷಾರಾಮಿ ಕಾರಿನಲ್ಲಿದ್ದ ಇಬ್ಬರಿಗೆ ಗಾಯಗಳಾಗಿವೆ. ಹೆದ್ದಾರಿಯ ಮಹಾಲಕ್ಷ್ಮೀ ಸೇತುವೆ ಬಳಿ ಬೆಳಗಿನ ಜಾವ 3.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಕಾಸ ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಲ್ವರು ಪ್ರಯಾಣಿಸುತ್ತಿದ್ದ ಕಾರು ಗುಜರಾತ್‌ನಿಂದ ಮುಂಬೈಗೆ ತೆರಳುತ್ತಿತ್ತು. ಹಿಂಬದಿಯಿಂದ ಬಸ್ಸಿಗೆ ಕಾರು ಡಿಕ್ಕಿ ಹೊಡೆದಿದೆ. ಈ ಸಂದರ್ಭ ಮಹಿಳೆ ಸೇರಿ ಕಾರಿನಲ್ಲಿದ್ದ ನಾಲ್ಕೂ ಮಂದಿ ಮೃತಪಟ್ಟಿದ್ದಾರೆ ಎಂದು ಅವರು ಹೇಳಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದ್ದು, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.