ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಮರನಾಥದಲ್ಲಿ ದಿಢೀರ್ ಪ್ರವಾಹ: ರಕ್ಷಣಾ ಕಾರ್ಯಾಚರಣೆಗೆ ಧಾವಿಸಿದ ವಾಯುಪಡೆ

Last Updated 10 ಜುಲೈ 2022, 1:21 IST
ಅಕ್ಷರ ಗಾತ್ರ

ಶ್ರೀನಗರ: ದಕ್ಷಿಣ ಕಾಶ್ಮೀರದ ಅಮರನಾಥದಲ್ಲಿ ಶುಕ್ರವಾರ ಸಂಭವಿಸಿದ ದಿಢೀರ್ ಪ್ರವಾಹದ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆಯ ಎಂಐ–17 ಹಾಗೂ ಅತ್ಯಾಧುನಿಕ ಚೀತಲ್‌ ಹೆಲಿಕಾಪ್ಟರ್‌ಗಳನ್ನು ನಿಯೋಜಿಸಲಾಗಿದೆ.

ಅತ್ಯಾಧುನಿಕ ಉಪಕರಣಗಳೊಂದಿಗೆ ಪರ್ವತ ರಕ್ಷಣಾ ತಂಡಗಳು ಹಾಗೂ ನಿಗಾ ತಂಡಗಳು ಕಾರ್ಯಾಚರಣೆ ಕೈಗೊಂಡಿವೆ. ಅವಶೇಷಗಳಡಿ ಬದುಕುಳಿದವರನ್ನು ಪತ್ತೆ ಹಚ್ಚಲು ಶ್ವಾನದಳದ ನೆರವು ಪಡೆಯಲಾಗಿದೆ ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

ಯಾತ್ರಾಸ್ಥಳದಲ್ಲಿಧಾರಾಕಾರ ಮಳೆಯಿಂದಾಗಿ ಉಂಟಾದ ಪ್ರವಾಹದಿಂದಾಗಿ ಮೃತಪಟ್ಟವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್‌)ಮಹಾನಿರ್ದೇಶಕ ಅತುಲ್ ಕರ್ವಾಲ್ ತಿಳಿಸಿದ್ದಾರೆ.

ಬದುಕುಳಿದವರಿಗಾಗಿ ರಕ್ಷಣಾ ತಂಡಗಳು ಶುಕ್ರವಾರ ರಾತ್ರಿಯಿಂದಲೂ ಕಾರ್ಯಾಚರಣೆ ನಡೆಯುತ್ತಿದೆ. 15 ಸಾವಿರಕ್ಕೂ ಹೆಚ್ಚು ಅಮರನಾಥ ಯಾತ್ರಾರ್ಥಿಗಳನ್ನು ಬೇಸ್‌ಕ್ಯಾಂಪ್‌ಗೆ ಸ್ಥಳಾಂತರಿಸಲಾಗಿದೆ. ನಾಪತ್ತೆಯಾದ ಇನ್ನೂ 40 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT