ಗುರುವಾರ , ಡಿಸೆಂಬರ್ 1, 2022
27 °C

ಜಮ್ಮು ಮತ್ತು ಕಾಶ್ಮೀರ ಎನ್‌ಕೌಂಟರ್: ನಾಲ್ವರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಎರಡು ಪ್ರತ್ಯೇಕ ಗುಂಡಿನ ಕಾಳಗದಲ್ಲಿ ನಾಲ್ವರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶೋಪಿಯಾನ್‌ನ ದ್ರಾಚ್‌ ಪ್ರದೇಶದಲ್ಲಿ ಜೈಷ್–ಎ–ಮೊಹಮ್ಮದ್ ಸಂಘಟನೆಯ ಮೂವರು ಉಗ್ರರು ಮತ್ತು ದಕ್ಷಿಣ ಕಾಶ್ಮೀರದ ಮೂಲ್‌ ಪ್ರದೇಶದಲ್ಲಿ ಲಷ್ಕರ್‌ ಎ ತಯಬಾ ಸಂಘಟನೆಯ ಒಬ್ಬ ಉಗ್ರನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

‘ದ್ರಾಚ್‌ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೃತಪಟ್ಟ ಉಗ್ರರ ಪೈಕಿ ಇಬ್ಬರನ್ನು ಹನನ್‌ ಬಿನ್‌ ಯಾಕೂಬ್‌ ಮತ್ತು ಜಮ್ಶೆಡ್‌ ಎಂದು ಗುರುತಿಸಲಾಗಿದೆ. ಇವರು ಅ.2ರಂದು ಪುಲ್ವಾಮಾದಲ್ಲಿ ನಡೆದ ವಿಶೇಷ ಪೊಲೀಸ್ ಅಧಿಕಾರಿ ಜಾವೇದ್‌ ದಾರ್‌ ಅವರ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಕಾಶ್ಮೀರ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ವಿಜಯ್‌ ಕುಮಾರ್‌ ತಿಳಿಸಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು