ಭಾನುವಾರ, ಏಪ್ರಿಲ್ 2, 2023
32 °C

ಜಮ್ಮು ಮತ್ತು ಕಾಶ್ಮೀರ: ಭದ್ರತಾ ಪಡೆ ಕಾರ್ಯಾಚರಣೆಯಲ್ಲಿ ನಾಲ್ವರು ಉಗ್ರರ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಮತ್ತು ಪುಲ್ವಾಮಾ ಜಿಲ್ಲೆಗಳಲ್ಲಿ ಗುರುವಾರ ನಡೆಸಿದ ಪ್ರತ್ಯೇಕ ಕಾಯಾರ್ಚರಣೆಗಳಲ್ಲಿ ಭದ್ರತಾ ಪಡೆಯು ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕುಲ್ಗಾಂ ಜಿಲ್ಲೆಯ ಜೋಡರ್ ಪ್ರದೇಶದಲ್ಲಿ ಉಗ್ರರು ಇರುವ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಭದ್ರತಾ ಪಡೆಯು ಶೋಧ ಕಾರ್ಯಾಚರಣೆ ನಡೆಸಿತ್ತು ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಇದನ್ನೂ ಓದಿ: 

ಬಳಿಕ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರರನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಶೋಧ ಕಾರ್ಯಾಚರಣೆ ಈಗಲೂ ಮುಂದುವರಿದಿದೆ ಎಂದು ತಿಳಿಸಿದೆ.

ಪುಲ್ವಾಮಾ ಜಿಲ್ಲೆಯ ಪುಚಲ್‌ನಲ್ಲಿ ನಡೆದ ಮತ್ತೊಂದು ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರು ಹತರಾಗಿದ್ದಾರೆ ಎಂದು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು