ಬುಧವಾರ, ಅಕ್ಟೋಬರ್ 28, 2020
24 °C

ಮಹಾರಾಷ್ಟ್ರ: ಕೊಡಲಿಯಿಂದ ಕೊಚ್ಚಿ ನಾಲ್ಕು ಮಕ್ಕಳ ಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಒಡಹುಟ್ಟಿದ ನಾಲ್ಕು ಮಕ್ಕಳನ್ನು ಅಪರಿಚಿತ ವ್ಯಕ್ತಿಯೊಬ್ಬ ಕೊಡಲಿಯಿಂದ ಕೊಚ್ಚಿ ಹತ್ಯೆ ಮಾಡಿರುವ ಘಟನೆ ಉತ್ತರ ಮಹಾರಾಷ್ಟ್ರದ ಜಲಗಾಂವ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದರು.

ಜಿಲ್ಲೆಯ ರಾವೆರ್‌ ತಾಲೂಕಿನ ಬೊರ್ಖೆಡಾ ಶಿವರ್‌ ಹಳ್ಳಿಯಲ್ಲಿ ಶುಕ್ರವಾರ ಮುಂಜಾನೆ ಈ ಘಟನೆ ಬೆಳಕಿಗೆ ಬಂದಿದ್ದು, ಜಮೀನಿನಲ್ಲಿರುವ ಮನೆಯೊಂದರಲ್ಲಿ ರಕ್ತದ ಮಡುವಿನಲ್ಲಿ ಮಕ್ಕಳ ಶವ ದೊರಕಿದೆ. 

‘ಮಕ್ಕಳ ಪಾಲಕರು ತಮ್ಮ ಹಿರಿಯ ಮಗನೊಂದಿಗೆ ಕುಟುಂಬದ ಸದಸ್ಯರೊಬ್ಬರ ‘ದಶಕ್ರಿಯಾ’ಗೆ ತೆರಳಿದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಜಮೀನಿನ ಮಾಲೀಕ ಮನೆಗೆ ತೆರಳಿದ ಸಂದರ್ಭದಲ್ಲಿ ಕೃತ್ಯ ಬೆಳಕಿಗೆ ಬಂದಿದ್ದು, ತಕ್ಷಣವೇ ಹಳ್ಳಿಯ ಜನರಿಗೆ ಹಾಗೂ ಪೊಲೀಸರಿಗೆ ಅವರು ಮಾಹಿತಿ ನೀಡಿದ್ದರು. ಸಂಗೀತ(13), ರಾಹುಲ್‌ (11), ಅನಿಲ್‌(8) ಹಾಗೂ ನಾನಿ(6) ಮೃತಪಟ್ಟ ಮಕ್ಕಳು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ’ ಎಂದು ಪೊಲೀಸ್‌ ಅಧಿಕಾರಿ ಮಾಹಿತಿ ನೀಡಿದರು. 

‘ಮಕ್ಕಳ ಕುತ್ತಿಗೆಯಲ್ಲಿ ಆಳವಾದ ಗಾಯಗಳಿದ್ದು, ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಅಪರಿಚಿತ ವ್ಯಕ್ತಿಯ ಮೇಲೆ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ತನಿಖೆ ಆರಂಭಿಸಲಾಗಿದೆ’ ಎಂದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು