ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಗುಂಡಿನ ಚಕಮಕಿ; ನಾಲ್ವರು ನಕ್ಸಲರ ಹತ್ಯೆ

Last Updated 13 ನವೆಂಬರ್ 2021, 8:53 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಗಡ್‌ಚಿರೋಲಿ ಜಿಲ್ಲೆಯಲ್ಲಿ ಶನಿವಾರ ಬಂಡುಕೋರರ ವಿರುದ್ಧ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ನಾಲ್ವರು ನಕ್ಸಲರು ಹತರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗಡ್‌ಚಿರೋಲಿ ಜಿಲ್ಲೆಯ ಗ್ಯಾರಹ್‌ಬತ್ತಿ ಅರಣ್ಯ ವಲಯದ ಧನೊರಾದಲ್ಲಿ ಕಾರ್ಯಾಚರಣೆ, ಗುಂಡಿನ ಚಕಮಕಿ ನಡೆದಿದೆ. ಕಾರ್ಯಾಚರಣೆ ನಡೆಸುತ್ತಿದ್ದ ಪೊಲೀಸ್ ತಂಡದ ಮೇಲೆ ಬಂಡುಕೋರರು ಗುಂಡು ಹಾರಿಸಿದ್ದಾರೆ. ಪ್ರತಿಯಾಗಿ ಪೊಲೀಸರೂ ಗುಂಡಿನ ದಾಳಿ ನಡೆಸಿದ್ದಾರೆ ಎಂದು ತಿಳಿಸಿದ್ದಾರೆ.

‘ಪ್ರಾಥಮಿಕ ಮಾಹಿತಿ ಪ್ರಕಾರ, ಗುಂಡಿನ ದಾಳಿಯಿಂದ ನಾಲ್ವರು ನಕ್ಸಲರು ಸತ್ತಿದ್ದಾರೆ. ಅಂತಿಮ ವರದಿ ಬಂದಾಗ ಕಾರ್ಯಾಚರಣೆ ಮುಂದುವರಿದಿತ್ತು’ ಎಂದು ಆ ಅಧಿಕಾರಿ ವಿವರಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT