ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೂರ್ವ ದೆಹಲಿಯ ಕಟ್ಟಡದಲ್ಲಿ ಬೆಂಕಿ ಅವಘಡ: ಒಂದೇ ಕುಟುಂಬದ ನಾಲ್ವರು ಸಾವು

Last Updated 26 ಅಕ್ಟೋಬರ್ 2021, 6:40 IST
ಅಕ್ಷರ ಗಾತ್ರ

ನವದೆಹಲಿ: ಪೂರ್ವ ದೆಹಲಿಯ ಓಲ್ಡ್‌ ಸೀಮಾಪುರಿ ಪ್ರದೇಶದಲ್ಲಿನ ಕಟ್ಟಡವೊಂದರ ಮೂರನೇ ಮಹಡಿಯಲ್ಲಿ ಮಂಗಳವಾರ ಮುಂಜಾನೆ 4 ಗಂಟೆ ಸುಮಾರಿಗೆ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.

ಮೃತರನ್ನು ಹೋರಿಲಾಲ್ (59), ಅವರ ಪತ್ನಿ ರೀನಾ (55), ಪುತ್ರ ಅಶು (24) ಮತ್ತು ಪುತ್ರಿ ರೋಹಿಣಿ (18) ಎಂದು ಗುರುತಿಸಲಾಗಿದೆ.

ಹೋರಿಲಾಲ್‌–ರೀನಾ ದಂಪತಿಯ ಮತ್ತೊಬ್ಬ ಪುತ್ರ ಅಕ್ಷಯ್‌(22) ಎರಡನೇ ಮಹಡಿಯಲ್ಲಿ ಮಲಗಿದ್ದ ಕಾರಣ ಈ ಅವಘಡದಿಂದ ಪಾರಾಗಿದ್ದಾರೆ ಎಂದು ಅವರು ಹೇಳಿದರು.

ಬೆಂಕಿ ಅವಘಡದ ವಿಷಯ ತಿಳಿದ ತಕ್ಷಣ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದವು ಎಂದು ದೆಹಲಿ ಅಗ್ನಿಶಾಮಕ ಸೇವೆಗಳ ನಿರ್ದೇಶಕ ಅತುಲ್ ಗರ್ಗ್ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT