ಸೋಮವಾರ, ಮಾರ್ಚ್ 27, 2023
30 °C

ಕೇರಳದ ಒಂದೇ ಕುಟುಂಬದ ನಾಲ್ವರು ಸಾವು, ಕೊಲೆ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರಂ: ಕೊಟ್ಟಾರಕರ ಬಳಿಯಲ್ಲಿ ಒಂದೇ ಕುಟುಂಬದ ಮೂವರು ಅನೇಕ ಗಾಯದೊಂದಿಗೆ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಘೋರ ಕೃತ್ಯ ಎಸಗಿದ್ದಾನೆ ಎನ್ನಲಾದ ವ್ಯಕ್ತಿ ಕೂಡ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ನೇಣು ಬಿಗಿದುಕೊಂಡಿದ್ದ ರಾಜೇಂದ್ರ, ಪತ್ನಿ ಅನಿತಾ, ಮಕ್ಕಳಾದ ಆದಿತ್ಯ ಮತ್ತು ಅಮೃತಾ ಎಂದು ಗುರುತಿಸಲಾಗಿದೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮನೆಯನ್ನು ತಪಾಸಣೆ ನಡೆಸಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಕೂಡ ಸ್ಥಳಕ್ಕೆ ಆಗಮಿಸಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಆಟೋ ಚಾಲಕನಾಗಿದ್ದ ನೆರೆಮನೆಯ ರಾಜೇಂದ್ರನ್, ಕುಟುಂಬದಲ್ಲಿ ಬೇರೆ ಯಾವುದೇ ಸಮಸ್ಯೆಯಿದ್ದ ಬಗ್ಗೆ ಮಾಹಿತಿಯಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು