ಮಂಗಳವಾರ, ಜನವರಿ 31, 2023
19 °C

ಲಖನೌದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ: ಹಲವರು ಸಿಲುಕಿರುವ ಶಂಕೆ

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ಲಖನೌ: ಉತ್ತರಪ್ರದೇಶದ ರಾಜಧಾನಿ ಲಖನೌದಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು ಅವಶೇಷಗಳ ಅಡಿಯಲ್ಲಿ ಹಲವರು ಸಿಲುಕಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ಸಿಬ್ಬಂದಿ ಹಾಗೂ ಎನ್‌ಡಿಆರ್‌ಎಫ್‌ ಅಧಿಕಾರಿಗಳು ಬಿರುಸಿನ ಕಾರ್ಯಾಚರಣೆ ನಡೆಸುತ್ತಿದ್ದಾರೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಇಲ್ಲಿನ ಹಸನ್‌ಗಂಜ್‌ನಲ್ಲಿರುವ ನಾಲ್ಕು ಅಂತಸ್ತಿನ ಕಟ್ಟಡದಲ್ಲಿ ಐದು ಕುಟುಂಬಗಳು ವಾಸವಾಗಿದ್ದವು. ಮೂವರನ್ನು ರಕ್ಷಣೆ ಮಾಡಲಾಗಿದ್ದು ಇನ್ನು 8 ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ದೆಹಲಿ, ಲಖನೌ ಸೇರಿದಂತೆ ಇಂದು ಉತ್ತರ ಭಾರತದ ಹಲವು ಭಾಗಗಳಲ್ಲಿ ಭೂಮಿ ಕಂಪಿಸಿತ್ತು. ಇದರ ಪರಿಣಾಮ ಹಳೆಯದಾಗಿದ್ದ ಈ ಕಟ್ಟಡ ಹೆಚ್ಚು ಬಿರುಕು ಬಿಟ್ಟಿತ್ತು. ಮಂಗಳವಾರ ರಾತ್ರಿ ಏಕಾಏಕಿ ಕುಸಿದಿದೆ ಎಂದು ಸ್ಥಳೀಯರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು