ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯ ತುರ್ಕ್‌ಮ್ಯಾನ್ ಗೇಟ್ ಬಳಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ

Last Updated 31 ಜನವರಿ 2021, 8:35 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ತುರ್ಕ್‌ಮ್ಯಾನ್‌ ಗೇಟ್‌ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದುಬಿದ್ದಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ವರದಿಯಾಗಿದೆ.

ಕಟ್ಟಡವು ಶಿಥಿಲಾವಸ್ಥೆಯಲ್ಲಿದ್ದುದರಿಂದ, ಕಟ್ಟಡದಲ್ಲಿದ್ದವರನ್ನು ಈ ಮೊದಲೇ ಬೇರೆಡೆಗೆ ಸ್ಥಳಾಂತರಿಸಲಾಗಿತ್ತು.‌ ಘಟನೆ ವೇಳೆ ಯಾವುದೇ ಸಾವು–ನೋವಿನ ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ (ಎನ್‌ಡಿಆರ್‌ಎಫ್‌) ಸ್ಥಳಕ್ಕೆ ಧಾವಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT