ಮೀರತ್: ಉತ್ತರ ಪ್ರದೇಶದ ಮೀರತ್‌ನಲ್ಲಿ ಶಿಕ್ಷಕಿಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾಲ್ವರು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಶಿಕ್ಷಕಿ ಬಗ್ಗೆ ವಿದ್ಯಾರ್ಥಿಗಳು ಅಶ್ಲೀಲ ಕಾಮೆಂಟ್ ಮಾಡುತ್ತಿರುವ ಎರಡು ವಿಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದ್ದವು.

ಕಿಥೌರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾಧನಾ ಇನಾಯತ್‌ಪುರ್ ಹಳ್ಳಿಯ ಶಾಲೆಯಲ್ಲಿ ಘಟನೆ ನಡೆದಿದ್ದು, ಈ ಗುಂಪಿನಲ್ಲಿ ಒಬ್ಬ ವಿದ್ಯಾರ್ಥಿನಿಯೂ ಇದ್ದಾರೆ.

12ನೇ ತರಗತಿಯ ವಿದ್ಯಾರ್ಥಿಗಳು ಬಹಳ ಸಮಯದಿಂದ ತಮಗೆ ಕಿರುಕುಳ ನೀಡುತ್ತಿರುವುದಾಗಿ ಭಾನುವಾರ 27 ವರ್ಷದ ಶಿಕ್ಷಕಿ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

‘ವಿದ್ಯಾರ್ಥಿಗಳು ಆಕ್ಷೇಪಾರ್ಹ ಮಾತುಗಳನ್ನು ಆಡಿದ್ದಾರೆ. ಶಿಕ್ಷಕಿ ಹಲವು ಬಾರಿ ತಿಳಿಹೇಳಿದ್ದರೂ ಪ್ರಯೋಜನವಾಗಿಲ್ಲ’ಎಂದು ಠಾಣಾಧಿಕಾರಿ ಅರವಿಂದ್ ಮೋಹನ್ ಶರ್ಮಾ ಹೇಳಿದ್ದಾರೆ.

ಜೂನ್ 24ರಂದುಶಾಲಾ ಆವರಣದಲ್ಲಿ ಶಿಕ್ಷಕಿಗೆ ‘ಐ ಲವ್ ಯೂ’ ಎಂದು ಕರೆದಿದ್ದಾರೆ. ಅಲ್ಲದೆ, ಅದರ ವಿಡಿಯೊವನ್ನೂ ಮಾಡಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ವಶಕ್ಕೆ ಪಡೆದಿರುವ ವಿದ್ಯಾರ್ಥಿಗಳು 16 ವರ್ಷದ ಆಸುಪಾಸಿನಲ್ಲಿದ್ದು, ಬಾಲ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.