ಶುಕ್ರವಾರ, ಅಕ್ಟೋಬರ್ 7, 2022
24 °C

ನೊಯಿಡಾ: ಹೌಸಿಂಗ್ ಸೊಸೈಟಿ ಗೋಡೆ ಕುಸಿದು ನಾಲ್ವರು ಸಾವು, ಹಲವರು ಸಿಲುಕಿರುವ ಶಂಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನೊಯಿಡಾ: ಹೌಸಿಂಗ್‌ ಸೊಸೈಟಿಯ ತಡೆ ಗೋಡೆ ಕುಸಿದು ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮಂಗಳವಾರ ಬೆಳಗ್ಗೆ ದುರ್ಘಟನೆ ಸಂಭವಿಸಿದೆ.

ನೊಯಿಡಾ ಸೆಕ್ಟರ್‌ 21ರ ಜಲ್‌ ವಾಯು ವಿಹಾರ್‌ ಪ್ರದೇಶದ ಹೌಸಿಂಗ್‌ ಸೊಸೈಟಿಯ ತಡೆ ಗೋಡೆ ಕುಸಿದಿದೆ. ಹಲವು ಕಾರ್ಮಿಕರು ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದುವರೆಗೆ 12 ಕಾರ್ಮಿಕರನ್ನು ರಕ್ಷಿಸಲಾಗಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ರಕ್ಷಣಾ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳು ತಿಳಿಸಿದ್ದಾರೆ.

ನಗರಗಳಲ್ಲಿ ಕಟ್ಟಡ ಕುಸಿತ, ಅಗ್ನಿ ಅನಾಹುತಗಳು ಸಂಭವಿಸುತ್ತಿರುವ ಅತ್ಯಂತ ಕಳವಳಕಾರಿ ಸಂಗತಿ. ಕಾನೂನನ್ನು ಪಾಲಿಸಿದರೆ ಇಂತಹ ಅವಘಡಗಳನ್ನು ತಪ್ಪಿಸಬಹುದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು