ಗುರುವಾರ , ಡಿಸೆಂಬರ್ 3, 2020
18 °C

ತಮಿಳುನಾಡು ಜನರಿಗೆ ಉಚಿತ ಲಸಿಕೆ: ಮುಖ್ಯಮಂತ್ರಿ ಭರವಸೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಪುದುಕೋಟೆ (ಪಿಟಿಐ): ತಮಿಳುನಾಡಿನ ಜನರಿಗೆ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಕೆ. ಪಳನಿಸ್ವಾಮಿ ಗುರುವಾರ ಘೋಷಿಸಿದ್ದಾರೆ. ಲಸಿಕೆ ಲಭ್ಯವಾದ ತಕ್ಷಣ ರಾಜ್ಯದ ಎಲ್ಲ ವರ್ಗದ ಜನರಿಗೂ ಪೂರೈಸುವುದಾಗಿ ಭರವಸೆ ನೀಡಿದ್ದಾರೆ. ಔಷಧದ ವೆಚ್ಚವನ್ನು ತಮಿಳುನಾಡು ಸರ್ಕಾರ ಭರಿಸಲಿದೆ ಎಂದಿದ್ದಾರೆ.

ಮುಂದಿನ ಕೆಲವು ತಿಂಗಳಲ್ಲಿ ಲಸಿಕೆ ಲಭ್ಯವಾಗುವ ನಿರೀಕ್ಷೆಯಿದ್ದು, ಅದರ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಬೇಕಿದೆ ಎಂದು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಕಳೆದವಾರ ಹೇಳಿಕೆ ನೀಡಿದ್ದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು