ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್ ಸಮಯದಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರಧಾನ್ಯ ಪೂರೈಕೆ: ಸೀತಾರಾಮನ್

Last Updated 1 ಫೆಬ್ರುವರಿ 2023, 9:01 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್‌–19ರ ಸಮಯದಲ್ಲಿ 80 ಕೋಟಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಸಾಂಕ್ರಾಮಿಕ ಸಮಯದಲ್ಲಿ ಯಾರೂ ಹಸಿವಿನಿಂದ ಬಳಲದಂತೆ ಕೇಂದ್ರ ಸರ್ಕಾರ ಕ್ರಮವಹಿಸಿದೆ ಎಂದು ಕೇಂದ್ರ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಬುಧವಾರ ಹೇಳಿದ್ದಾರೆ.

ಭಾರತ ಜಿ-20 ಅಧ್ಯಕ್ಷತೆವಹಿಸಿಕೊಂಡಿದ್ದು, ಜಾಗತಿಕ ಮಟ್ಟದಲ್ಲಿ ಭಾರತ ಸದೃಢಗೊಳ್ಳಲು ಒಂದು ಪ್ರಮುಖ ಕಾರಣ ಎಂದರು.

ಜನವರಿ 1 ರಿಂದ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (ಪಿಎಂಜಿಕೆಎವೈ) ಅಡಿಯಲ್ಲಿ ಬಡವರಿಗೆ ಉಚಿತ ಆಹಾರ ಧಾನ್ಯಗಳನ್ನು ಪೂರೈಸುವ ಯೋಜನೆಯಡಿ ₹2 ಲಕ್ಷ ಕೋಟಿ ರೂಪಾಯಿ ವೆಚ್ಚದಲ್ಲಿ ಈ ಕಾರ್ಯಕ್ರಮವನ್ನು ಜಾರಿಗೊಳಿಸಿದೆ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರವು ಬೆಳೆ ಮತ್ತು ಉತ್ಪಾದಕತೆಯನ್ನು ಹೆಚ್ಚಿಸುವ ಸಲುವಾಗಿ ಬೆಂಬಲ ಬೆಲೆ ಮತ್ತು ಬೆಳೆ ವೈವಿಧ್ಯೀಕರಣವನ್ನು ಉತ್ತೇಜಿಸಿದೆ. ಇದರಿಂದ ರೈತರಿಗೆ ಕೃಷಿ ಮತ್ತು ಸಂಬಂಧಿತ ವಲಯದ ಬೆಳವಣಿಗೆಯು ವರ್ಷಗಳಿಂದ ಉತ್ಕೃಷ್ಟವಾಗಿದೆ. ಕಳೆದ ಹಣಕಾಸಿನ ವರ್ಷದಲ್ಲಿ ಕೃಷಿ ವಲಯದಲ್ಲಿ ಖಾಸಗಿ ಹೂಡಿಕೆಯು ಶೇ.9.3 ಹಾಗೂ 2020ರಲ್ಲಿ ಶೇ.7ರಷ್ಟು ಹೆಚ್ಚಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT